Karnataka News

*ಸರ್ಕಾರಿ ನೌಕರರ ತುರ್ತು ಗಮನಕ್ಕೆ*

ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಕಚೇರಿ ಅಧಿಕಾರಿಗಳು, ಸಿಬ್ಬಂದಿಗಳು, ನಿಗಮಮಂಡಳಿಗಳ ನಿರ್ದೇಶನಾಯಲ, ಆಯುಕ್ತಾಯ ಸೇರಿದಂತೆ ಎಲ್ಲ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿ ಟ್ಯಾಗ್ ಹಾಕಿಕೊಳ್ಳುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಮತ್ತೊಮ್ಮೆ ಸುತ್ತೋಲೆ ಪ್ರಕಟಿಸಿದೆ.

ಆಗಸ್ಟ್ 16ರಂದು ಈ ಬಗ್ಗೆ ಸರ್ಕಾರ ಸುತ್ತೋಲೆ ಹೊರಡಿಸಿದ್ದರೂ ನಿಗಮ ಮಂಡಳಿ ನಿರ್ದೇಶನಾಲಯ, ಆಯುಕ್ತಾಲಯ ಹಾಗೂ ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಸುತ್ತೋಲೆಯ ಸೂಚನೆ ಪಾಲಿಸುತ್ತಿಲ್ಲ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 1 ಕನ್ನಡ ರಾಜ್ಯೋತ್ಸವದ ದಿನದ ಒಳಗಾಗಿ ರಾಜ್ಯ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ತಮ್ಮ ಇಲಾಖೆ ಸಂಖ್ಯೆಯ ಗುರುತಿನ ಚೀಟಿಗಳನ್ನು ಧರಿಸಬೇಕು.

‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳು ಪಟ್ಟಿಯನ್ನು ನವೆಂಬರ್ 1 ಕನ್ನಡ ರಾಜ್ಯೋತ್ವಸದ ದಿನದಿಂದ ಕಡ್ಡಾಯವಾಗಿ ಧರಿಸಬೇಕು ಎಂದು ಸರ್ಕಾರ ಮತ್ತೊಮ್ಮೆ ಸುತ್ತೋಲೆ ಪ್ರಕಟಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button