Belagavi NewsBelgaum NewsKannada NewsKarnataka NewsNational

*ಬೆಳಗಾವಿ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ರೆಡ್ ಜೋನ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಸಾಂಬ್ರಾ ವಿಮಾನ ನಿಲ್ದಾಣದ 8 ಕಿಲೋಮೀಟರ್ ವ್ಯಾಪ್ತಿಯನ್ನು ರೆಡ್ ಜೋನ್ (Red Zone) ಎಂದು ಘೋಷಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬೂಷಣ ಬೋರಸೆ ಅವರು ತಿಳಿಸಿದ್ದಾರೆ.

ನಾಗರಿಕ ವಿಮಾನಯಾನ ಮಹಾ ನಿರ್ದೇಶಕರು (DGCA) ಈಗಾಗಲೇ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯನ್ನು ರೆಡ್ ಜೋನ್ (Red Zone) ಎಂದು ಘೋಷಿಸಿದ್ದಾರೆ.

Home add -Advt

ವಿಮಾನ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯಲ್ಲಿ (Red Zone/ Yellow Zone) ಯಾವುದೇ ರೀತಿಯ ಡೋನ್ /ಅನಮ್ಯಾನಡ್ ಏರಿಯಲ್ ವಾಹನ (UAV/Drone) ಹಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

 ಈ ಆದೇಶ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. 

Related Articles

Back to top button