
ಬ್ಯಾನರ್ ಗಲಾಟೆ ಬೆನ್ನಲ್ಲೇ ಮತ್ತೊಂದು ಘಟನೆ
ಪ್ರಗತಿವಾಹಿನಿ ಸುದ್ದಿ: ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಮನೆ ಮುಂದೆ ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದುದ್ದ ಗಲಾಟೆ-ಫೈರಿಂಗ್ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ. ಬಳ್ಳಾರಿಯಲ್ಲಿ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಜನಾರ್ಧನ ರೆಡ್ಡಿ ಹಾಗೂ ಶ್ರೀರಾಮುಲು ಅವರಿಗೆ ಸೇರಿದ ಬಳ್ಳಾರಿ ಹೊರವಲಯದಲ್ಲಿರುವ ಮಾಡೆಲ್ ಹೌಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಹೌಸ್ ಧಗ ಧಗನೆ ಹೊತ್ತಿ ಉರಿದಿದೆ.
ಬೆಂಕಿ ಅವಘಡ ಬೆನ್ನಲ್ಲೇ ಶಾಸಕ ಸೋಮಶೇಖರ್ ರೆಡ್ಡಿ ಇದು ಕಾಂಗ್ರೆಸ್ ನವರ ಕೃತ್ಯ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಬೆಂಬಲಿಗರು ನಮ್ಮ ಮಾಡೆಲ್ ಹೌಸ್ ಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿ ಹಾಕಿದವರನ್ನು ನಮ್ಮ ಕಡೆಯವರು ಹಿಡಿಯಲು ಯತ್ನಿಸಿದ್ದಾರೆ. ಆದರೆ ಅವರು ಎಸ್ಕೇಪ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.
106 ಎಕರೆ ಪ್ರದೇಶದಲ್ಲಿ ಲೇಔಟ್ ನಿರ್ಮಾಣ ಮಾಡಲಾಗಿತ್ತು. ಲೇಔಟ್ ನಲ್ಲಿ ಮನೆ ಖರೀದಿ ಮಾಡುವವರುಗೆ ತೋರಿಸಲೆಂದು ಮಾಡೆಲ್ ಹೌಸ್ ನಿರ್ಮಾಣ ಮಾಡಲಾಗಿತ್ತು. ಈ ಮಾಡೆಲ್ ಹೌಸ್ ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಓಡಿ ಹೋಗಿದ್ದಾರೆ. ಮನೆಯಲ್ಲಿದ್ದ ಪೀಠೋಪಕರಣ, ಸೋಫಾ ಸೇರಿದಂತೆ ಇಡೀ ಹೌಸ್ ಸುಟ್ಟು ಕರಕಲಾಗಿದೆ. ಏನೂ ಉಳಿದಿಲ್ಲ. ಇದು ಕಾಂಗ್ರೆಸ್ ನವರದ್ದೇ ಕೃತ್ಯ ಎಂದು ಕಿಡಿಕಾರಿದ್ದಾರೆ.



