
ಪ್ರಗತಿವಾಹಿನಿ ಸುದ್ದಿ: ಸ್ವಾತಂತ್ರ್ಯ ದಿನಾಚರಣೆಗೆ ಕೆಲವೇ ದಿನಗಳು ಬಾಕಿ ಇವೆ. ದೇಶಾದ್ಯಂತ ಹೈ ಅಲರ್ಟ್ ಕೈಗೊಳ್ಳಲಾಗಿದೆ. ಈ ನಡುವೆ ಕೆಂಪು ಕೋಟೆ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಬಾಂಧಾದ ಐವರನ್ನು ಬಂಧಿಸಲಾಗಿದೆ.
ಕೆಂಪುಕೋಟೆಯ ಪ್ರವೇಶ ನಿಯಂತ್ರಣ ಬಿಂದುವಿನ ಬಳಿ ನಿಯೋಜಿಸಲಾಗಿರುವ ಪೊಲೀಸರು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು 2025 ವರ್ಷ ವಯಸ್ಸಿನವರು. ತಪಾಸಣೆ ವೇಳೆ ದಾಖಲೆಗಳನ್ನು ತೋರೊಸಲು ವಿಫಲರಾದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆ ನಡೆಸಿದಾಗ ಅವರು ಅಕ್ರಮವಾಗಿ ನೆಲೆಸಿರುವವರು ಎಂದು ತಿಳಿದುಬಂದಿದೆ.
ಕೆಂಪುಕೋಟೆ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ ಹಿನ್ನೆಲೆಯಲ್ಲಿ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.