
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿಯ ನೂತನ ಸಿಎಂ ರೇಖಾ ಗುಪ್ತಾ ಪ್ರಮಾಣ ವಚನಕ್ಕೆ ಕ್ಷಣಗಣನೆ ಆರಂಭವಾಗಿದೆ. ಎಬಿವಿಪಿಯಿಂದ ಮುನ್ನೆಲೆಗೆ ಬಂದು ರಾಜಕೀಯದಲ್ಲಿ ನೆಲೆ ಕಂಡುಕೊಂಡ ಮಹಿಳೆ ರೇಖಾ ಗುಪ್ತಾ ಅವರಿಗೆ ಮುಖ್ಯಮಂತ್ರಿ ಪಟ್ಟ ನೀಡಲಾಗಿದ್ದು ದೆಹಲಿ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಲಿದ್ದಾರೆ.
ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ರೇಖಾ ಗುಪ್ತಾ ಅವರಿಗೆ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೆನಾ ಇಂದು ಮಧ್ಯಾಹ್ನ 12:35 ಕ್ಕೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಇನ್ನು ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್, ಎನ್‌ಡಿಎ ನಾಯಕರು ಭಾಗವಹಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ