
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: 2023-24ನೇ ಸಾಲಿಗೆ ಜಾರಿಯಲ್ಲಿರುವ ಪಠ್ಯಪುಸ್ತಕಗಳನ್ನು ಸರ್ಕಾರದ ಆದೇಶದ ಮೇರೆಗೆ ವಿಷಯ ತಜ್ಞರು 1ರಿಂದ 10ನೇ ತರಗತಿಗಳ ಕನ್ನಡ ಭಾಷಾ ಪಠ್ಯಪುಸ್ತಕಗಳನ್ನು ಹಾಗೂ 6 ರಿಂದ 10ನೇ ತರಗತಿಗಳ ಸಮಾಜ ವಿಜ್ಞಾನ ಪಠ್ಯಪುಸ್ತಕಗಳನ್ನು ಪರಿಶೀಲಿಸಿ, ಕೆಲವು ಮಾರ್ಪಾಡುಗಳನ್ನು ಸೂಚಿಸಿದ್ದಾರೆ.
ತಿದ್ದೋಲೆ ರೂಪದಲ್ಲಿ ಸಿದ್ದಪಡಿಸಿ, ರಾಜ್ಯ ಸರ್ಕಾರ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಶಾಲೆಗಳಿಗೆ ನೀಡಲಾಗುವುದು. ತಿದ್ದೋಲೆಯ ಸಾಪ್ಟ್ ಪ್ರತಿಯನ್ನು ಕರ್ನಾಟಕ ಪಠ್ಯಪುಸ್ತಕ ಸಂಘದ ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.
ವಿವರ ಇಲ್ಲಿದೆ –


