*’ಪಂಚ ಗ್ಯಾರಂಟಿ’ ಬೆಳಗಾವಿ ಜಿಲ್ಲಾ ಕಿರುಪುಸ್ತಕ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದ ಸಮಗ್ರ ಅಭಿವೃದ್ಧಿ ಸಾಕಾರಕ್ಕಾಗಿ ರಾಜ್ಯ ಸರಕಾರವು ಜಾರಿಗೆ ತಂದಿರುವ “ಪಂಚ ಗ್ಯಾರಂಟಿ” ಯೋಜನೆಗಳ ಕುರಿತ ಕಿರುಪುಸ್ತಕವನ್ನು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಬಿಡುಗಡೆಗೊಳಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರಕಟಿಸಲಾಗಿರುವ ಪಂಚ ಗ್ಯಾರಂಟಿ ಕುರಿತ ಕಿರುಪುಸ್ತಕವನ್ನು ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಮಂಗಳವಾರ(ಮೇ 13) ಜರುಗಿದ ತ್ರೈಮಾಸಿಕ ಕೆ.ಡಿ.ಪಿ. ಸಭೆಯಲ್ಲಿ ಬಿಡುಗಡೆಗೊಳಿಸಿದರು.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್. ಪಾಟೀಲ(ಬ್ಯಾಡಗಿ), ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ, ಸವದತ್ತಿ ಶಾಸಕರಾದ ವಿಶ್ವಾಸ್ ವೈದ್ಯ, ಬೆಳಗಾವಿ(ಉತ್ತರ) ಶಾಸಕರಾದ ಆಸಿಫ್(ರಾಜು) ಸೇರ್, ಚಿಕ್ಕೋಡಿ-ಸದಲಗಾ ಶಾಸಕ ಗಣೇಶ್ ಹುಕ್ಕೇರಿ, ರಾಯಬಾಗ ಶಾಸಕ ದುರ್ಯೋಧನ ಐಹೊಳೆ, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ, ಬುಡಾ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷರಾದ ವಿನಯ ನಾವಲಗಟ್ಟಿ ಹಾಗೂ ಸಮಿತಿಯ ಎಲ್ಲ ಸದಸ್ಯರು, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.




