ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ವಿಧಾನಸೌಧದಲ್ಲಿ “ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ” ಕಾರ್ಯಕ್ರಮ ನಡೆಯಿತು.
ಬೆಳಗಾವಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕೂಡ ಈ ಕಾರ್ಯಕ್ರಮ ನೇರ ಪ್ರಸಾರವಾಯಿತು.
ಜಿಲ್ಲಾಮಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಸರ್ಕಾರದ ವರ್ಷದ ಪ್ರಗತಿ ವರದಿ ವಿಶೇಷ ಪುಸ್ತಕವನ್ನು ಬಿಡುಗಡೆಗೊಳಿಸಿದರು.
ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ವಿಧಾನಸಭೆಯ ಉಪ ಸಭಾಧ್ಯಕ್ಷರಾದ ಆನಂದ ಮಾಮನಿ, ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ರಾಜ್ಯ ಸಭೆ ಸದಸ್ಯರಾದ ಈರಣ್ಣ ಕಡಾಡಿ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಮಹೇಶ್ ಕುಮಠಳ್ಳಿ, ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್, ಶಾಸಕರಾದ ದುರ್ಯೋಧನ ಐಹೊಳೆ, ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಪೊಲೀಸ್ ಆಯುಕ್ತರಾದ ತ್ಯಾಗರಾಜನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮತ್ತಿತರರು ಉಪಸ್ಥಿತರಿದ್ದರು.
ವಿವಿಧ ಯೋಜನೆಗಳ ಫಲಾನುಭವಿಗಳು ಕೂಡ ಹಾಜರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ