*ರೈತರಿಗೆ ಪರಿಹಾರ ಬಿಡುಗಡೆ ಮಾಡಲಿ: ಸಿದಗೌಡ ಮೋದಗಿ ಆಗ್ರಹ*
ಪ್ರವಾಹ ಸಂತ್ರಸ್ತರಿಗೆ ನ್ಯಾಯ ಕೊಡಿಸುವುದು ಬಿಟ್ಟು ಪಾದಯಾತ್ರೆ ಮಾಡುತ್ತಿರುವುದು ಖಂಡನೀಯ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಳೆದ 2019 ರಲ್ಲಿ ಬಂದ ಅತಿವೃಷ್ಟಿ, ಅನಾವೃಷ್ಠಿಯಿಂದ ರೈತರ ಜೀವ, ಪ್ರಾಣ ಹಾನಿಯಾದರೂ ಇಲ್ಲಿಯವರೆಗೆ ಪರಿಹಾರ ನೀಡಿಲ್ಲ. ಅದನ್ನು ಬಿಡುಗಡೆ ಮಾಡಬೇಕು ಎಂದು ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಹೇಳಿದರು.
ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಪಕ್ಷ ನಾಯಕ ಆರ್. ಅಶೋಕ ಅವರು ಪ್ರವಾಹ ಸಂತ್ರಸ್ತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕು. ಅದನ್ನು ಬಿಟ್ಟು ಮೈಸೂರಿನ ಮುಡಾ ಹಗರಣದ ಬಗ್ಗೆ ಪಾದಯಾತ್ರೆ ನಡೆಸುತ್ತಿರುವುದು ಖಂಡನೀಯ ಎಂದರು.
ಜಿಲ್ಲೆಯಲ್ಲಿ ಒತ್ತುವರಿಯಾದ ನಾಲೆಯನ್ನು ತೆರವು ಮಾಡಿ ಅದನ್ನು ಶುಚಿಮಾಡಬೇಕು. ಖಾನಾಪುರದ ಕಾಡಂಚಿನ ಪ್ರದೇಶವನ್ನು ಕಡೆಗಣಿಸುತ್ತಿರುವುದು ಖಂಡನೀಯ. ಇಲ್ಲಿನ ಜನರಿಗೆ ಆರೋಗ್ಯ ಕೇಂದ್ರ ತೆರೆದು ಅವರಿಗೆ ಸರಕಾರ ಜಿಲ್ಲಾಡಳಿತದ ಮೂಲಕ ಸೂಕ್ತ ಚಿಕಿತ್ಸೆ ಕೊಡಿಸಬೇಕು. ರಾಜ್ಯ ಹೆದ್ದಾರಿಗಳಲ್ಲಿ ಶುಲ್ಕು ಮುಕ್ತ ಅವಕಾಶವನ್ನು ರೈತರಿಗೆ ಮಾಡಿಕೊಡಬೇಕು ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ