Latest

ತೊಗರಿ ಬೆಳೆಗಾರರಿಗೆ ಇಂದು ಪರಿಹಾರ ಘೋಷಣೆ: ಸಿಎಂ

 ಪ್ರಗತಿವಾಹಿನಿ ಸುದ್ದಿ, ಕಲಬುರಗಿ: ಸಂಕಷ್ಟದಲ್ಲಿರುವ ತೊಗರಿ ಬೆಳಗಾರರಿಗೆ ಪರಿಹಾರ ನೀಡಲು ಸರಕಾರ ತೀರ್ಮಾನಿಸಿದ್ದು, ಇಂದು ಸಂಜೆ 4 ಗಂಟೆಗೆ ಸಭೆ ಕರೆಯಲಾಗಿದೆ.  ಕೃಷಿ, ಆರ್ಥಿಕ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದು ಪರಿಹಾರದ ಮೊತ್ತ ನಿಗದಿಪಡಿಸಿ ಸಭೆಯ ನಂತರ ಘೋಷಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಇಲ್ಲಿನ ಏರ್ ಪೋರ್ಟ್ ನಲ್ಲಿ ಇಂದು  ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.

ಈ ಭಾಗದಲ್ಲಿ ತೊಗರಿ ಬೆಳೆದವರು ಸಮಸ್ಯೆಯಲ್ಲಿ ಸಿಲುಕಿದ್ದಾರೆ. ಸುಮಾರು 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ವಿಶೇಷವಾಗಿ ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಹೆಚ್ಚಾಗಿದ್ದು,  ರೈತರು ಪರಿಹಾರ ನೀಡಲು ಆಗ್ರಹಿಸಿದ್ದರು. ಇದಕ್ಕೆ ಸ್ಪಂದಿಸಿ ಸರಕಾರದಿಂದ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಗಾಣಗಾಪುರದ ಸಮಗ್ರ ಅಭಿವೃದ್ಧಿಗೆ 67 ಕೋಟಿ ರೂ. ಡಿಪಿಆರ್ ಸಿದ್ಧ ವಾಗಿದೆ.
ವಿಠ್ಠಲ ಹೇರೂರ ಅವರ ಮೂರ್ತಿಯ ಅನಾವರಣ ಹಾಗೂ ಶ್ರೀ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದೆ. ಗಾಣಗಾಪುರ ಅಭಿವೃದ್ಧಿಗೆ ಈಗಾಗಲೇ 5 ಕೋಟಿ ರೂ. ಅನುದಾನ ನೀಡಲಾಗಿದ್ದು, ಜಿಲ್ಲಾಡಳಿತ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದೆ ಎಂದು ಅವರು ಹೇಳಿದರು.

ಪಿಎಸ್ಐ ನೇಮಕಾತಿಗೆ ಸಂಬಂಧಿಸಿದಂತೆ ಆರೋಪಿ ರುದ್ರೇಗೌಡ ತನಿಖೆ ವಸ್ತುನಿಷ್ಠವಾಗಿ, ನಿಷ್ಪಕ್ಷಪಾತವಾಗಿ ನಡೆಯಲಿದೆ. ಅದೇ ರೀತಿ ತನಿಖಾಧಿಕಾರಿ ಡಿವೈಎಸ್ಪಿ ಶಂಕರಗೌಡರು 3 ಕೋಟಿ ಬೇಡಿಕೆ ಇಟ್ಟಿರುವ ವಿಷಯದ ಬಗ್ಗೆಯೂ ತನಿಖೆ ನಡೆಯಲಿದೆ ಎಂದರು.

20 ತಿಂಗಳ ಮಗುವಿನ ಮೇಲೆ ಅತ್ಯಾಚಾರ; ಅರೋಪಿ ಅರೆಸ್ಟ್

https://pragati.taskdun.com/rape-of-20-month-old-child-arrest-of-the-accused/

ಜಿಲ್ಲಾಧಿಕಾರಿಗೆ ರಾಜ್ಯಮಟ್ಟದ ಪ್ರಶಸ್ತಿ

https://pragati.taskdun.com/state-level-award-for-deputy-commissioner/

ಪದವಿ ಪ್ರದಾನದ ವೇಳೆ ಅರಳಿತು ಕನ್ನಡ ಧ್ವಜ

https://pragati.taskdun.com/the-kannada-flag-was-unfurled-during-the-graduation-ceremony/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button