Kannada NewsKarnataka NewsLatest

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಲಕ್ಷ್ಮಿತಾಯಿ ಫೌಂಡೇಶನ್ ನಿಂದ ಪರಿಹಾರ ವಿತರಣೆ

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಲಕ್ಷ್ಮಿತಾಯಿ ಫೌಂಡೇಶನ್ ನಿಂದ ಪರಿಹಾರ ವಿತರಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಹದಿಂದ ಸಂತ್ರಸ್ತರಾಗಿರುವ ಜನರ ಬಗೆಗೆ ವಿಶೇಷ ಕಾಳಜಿ ತೆಗೆದುಕೊಳ್ಳುತ್ತಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಶನಿವಾರ ಬೆಳಗ್ಗೆಯಿಂದ ನಿರಂತರವಾಗಿ ಅಗತ್ಯ ಸಾಮಗ್ರಿಗಳನ್ನು ವಿತರಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಬೈಂದೂರು ಬ್ಲಾಕ್ ಕಾಂಗ್ರೆಸ್, ಬೆಳಗಾವಿ ಯುವ ಕಾಂಗ್ರೆಸ್ ಹಾಗೂ  ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ಹಲವಾರು ಗ್ರಾಮಗಳಲ್ಲಿ ಪರಿಹಾರ ಸಾಮಗ್ರಿ ವಿತರಿಸಲಾಯಿತು. 
ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ನೇತೃತ್ವದಲ್ಲಿ ಪದಾಧಿಕಾರಿಗಳು ಗ್ರಾಮಗಳಿಗೆ ತೆರಳಿ ಪರಿಹಾರ ಹಂಚಿದರು. ಸಂತಿ ಬಸ್ತವಾಡ, ವಾಘವಾಡೆ, ಮಾರ್ಕಂಡೇಯ ನಗರ ಹಾಗೂ ಕಾಳೆನಟ್ಟಿ  ಗ್ರಾಮಗಳಲ್ಲಿ ಪ್ರವಾಹ ಪೀಡಿತ ಸಂತ್ರಸ್ತರಿಗೆ ಆರ್ಥಿಕ ಸಹಾಯ ಮಾತ್ರವಲ್ಲದೆ, ಆಹಾರ ಸಾಮಾಗ್ರಿಗಳು, ಬಟ್ಟೆ, ಹೊದಿಕೆ ರಗ್ಗು ಹಾಗೂ ಶಾಲೆಯ ಮಕ್ಕಳಿಗೆ ಬ್ಯಾಗ್ ಮುಂತಾದವುಗಳನ್ನು ವಿತರಿಸಲಾಯಿತು. 
ಸರಕಾರದಿಂದ ಪರಿಹಾರ ವಿಳಂಬವಾದರೂ ಜನರಿಗೆ ತೊಂದರೆಯಾಗದಿರಲಿ ಎಂದು ತುರ್ತು ಅಗತ್ಯ ಸಾಮಗ್ರಿಗಳನ್ನು ಗ್ರಾಮೀಣ ಕ್ಷೇತ್ರದ ಸಂತ್ರಸ್ತರಿಗೆ ಮಾಡಿಕೊಡಲಾಗುತ್ತಿದೆ.
ಕ್ಷೇತ್ರದ ಪ್ರತಿ ಗ್ರಾಮಕ್ಕೆ  ತೆರಳಿ ಅಲ್ಲಿನ ಸಂಕಷ್ಟ ಅರಿತು, ಅವರಿಗೆ ಅಗತ್ಯವಾದ ಪರಿಹಾರ ಸಾಮಗ್ರಿಗಳ ಪಟ್ಟಿ ಮಾಡಲಾಗುತ್ತಿದೆ. ಈ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಿ, ಸರಕಾರದಿಂದ ಪರಿಹಾರ ಕೊಡಿಸುವ ಪ್ರಯತ್ನದ ಜೊತೆಗೆ ಸಾರ್ವಜನಿಕರಿಂದಲೂ ಪರಿಹಾರ ದೊರಕಿಸಿಕೊಡಲು ಎಲ್ಲ ರೀತಿಯಿಂದಲೂ ಪ್ರಯತ್ನ ನಡೆಸಲಾಗುತ್ತಿದೆ.
ಪರಿಹಾರ ಹೊತ್ತು ತಂದು ಗ್ರಾಮೀಣ ಕ್ಷೇತ್ರದ ಜನರ ಸಂಕಷ್ಟಕ್ಕೆ ಸ್ಪಂದಿಸಿದ ಬೈಂದೂರು ಬ್ಲಾಕ್ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ಸಿನ ಎಲ್ಲ ಪದಾಧಿಕಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಖರ್ ಧನ್ಯವಾದ ಸಲ್ಲಿಸಿದ್ದಾರೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button