ಪ್ರಗತಿವಾಹಿನಿ ಸುದ್ದಿ: ವಾಯುಭಾರ ಕುಸಿತದ ಕಾರಣ ಮೇ 26 ಹಾಗೂ 27 ರಂದು ರಾಜ್ಯದಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ಈ ಚಂಡಮಾರುತಕ್ಕೆ ರೆಮಲ್ ಎಂದು ಹೆಸರಿಡಲಾಗಿದೆ. ಇದರಿಂದ ಬಂಗಾಳ ಕೊಲ್ಲಿಯಲ್ಲಿ ಮುಂಗಾರು ಪೂರ್ವ ಅವಧಿಯ ಮೊದಲ ಚಂಡಮಾರುತ ರೂಪುಗೊಳ್ಳುತ್ತಿದ್ದು, ಇದೇ ಭಾನುವಾರ ಪಶ್ಚಿಮ ಬಂಗಾಳ ಹಾಗೂ ಪಕ್ಕದ ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ.
ರೆಮಲ್ ಚಂಡಮಾರುತ ಶನಿವಾರ ತೀವ್ರ ಸ್ವರೂಪ ಪಡೆದು, ಗಂಟೆಗೆ 102 ಕಿ.ಮೀ. ವೇಗದಲ್ಲಿ ಅಪ್ಪಳಿಸಲಿದ್ದು, ಮೇ 26 ಹಾಗೂ 27ರಂದು ಪಶ್ಚಿಮ ಬಂಗಾಳ, ಒಡಿಶಾ, ಮಿಜೋರಾಂ, ತ್ರಿಪುರಾ ಹಾಗೂ ದಕ್ಷಿಣ ಮಣಿಪುರದ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿಸಲಿದೆ. ಕರ್ನಾಟಕ, ತಮಿಳುನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಮುಂಜಾಗೃತವಾಗಿ ಮೇ 27ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ