Belagavi NewsBelgaum News

*ಯಲ್ಲಮ್ಮ ಗುಡ್ಡದಲ್ಲಿ ಅನಧಿಕೃತ ಅಂಗಡಿಗಳ ತೆರವಿಗೆ ವಿರೋಧ; ಆಯುಕ್ತರ ಕಚೇರಿಗೆ ನುಗ್ಗಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಪ್ರಸಿದ್ಧ ಯಾತ್ರಾಸ್ಥಳ ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ದದಲ್ಲಿ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸಲು ಪ್ರಾಧಿಕಾರ ಮುಂದಾಗಿದೆ. ಮಳಿಗೆಗಳ ತೆರವಿಗೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಯಲ್ಲಮ್ಮನ ಗುಡ್ದ ಅಭಿವೃಧಿ ಪ್ರಾಧಿಕಾರದ ಆಯುಕ್ತ ಅಶೋಕ್ ದುಡಗುಂಟಿ ನೇತೃತ್ವದಲ್ಲಿ ಪೊಲೀಸ್ ಭದ್ರತೆಯಲ್ಲಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಆವರಣದಲ್ಲಿರುವ ಅನಧಿಕೃತ ಮಳಿಗೆಗಳನ್ನು ತೆರವು ಮಾಡಲು ಮುಂದಾಗಲಾಗಿದೆ. ಈ ವೇಳೆ ಮಳಿಗೆಯವರು ಹಾಗೂ ಸ್ಥಳೀಯರು ಅಂಗಡಿಗಳ ತೆರವಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಆಯುಕ್ತ ಅಶೋಕ್ ದುಡಗುಂಟಿ ಕಚೇರಿಗೆ ನುಗ್ಗಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಳಿಗೆಗಳನ್ನು ತೆರವು ಮಾಡದಂತೆ ಒತ್ತಾಯಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button