Film & EntertainmentKannada NewsKarnataka NewsNationalPolitics

*ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣ: 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ*

ಪ್ರಗತಿವಾಹಿನಿ ಸುದ್ದಿ : ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣ ಸಂಬಂಧ ನಟ ದರ್ಶನ್ ಸೇರಿ ಒಟ್ಟು 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಒಂದು ದಿನದವರೆಗೆ ವಿಸ್ತರಿಸಿ ಕೋರ್ಟ್ ಇಂದು ಆದೇಶಿಸಿದೆ.

ಕೊಲೆ ಕೇಸ್‌ನ ಎಲ್ಲಾ ಆರೋಪಿಗಳ ನ್ಯಾಯಾಂಗ ಅವಧಿ ಇಂದಿಗೆ ಅಂತ್ಯವಾದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್‌ ಈ ಆದೇಶ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಪೊಲೀಸರು ತನಿಖೆ ಪೂರ್ಣಗೊಳಿಸಿದ್ದು ಕೋರ್ಟ್ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ.

Home add -Advt

ಈ ಮೊದಲು ರಾಜ್ಯದ ವಿವಿಧ ಜಿಲ್ಲೆಗಳ ಜೈಲಿಗೆ ಆರೋಪಿಗಳನ್ನು ಶಿಫ್ಟ್ ಮಾಡಲಾಗಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಹತ್ಯೆ ಕೇಸ್‌ನಲ್ಲಿ ದರ್ಶನ್ A2 ಆರೋಪಿಯಾಗಿದ್ದರೆ, ದರ್ಶನ್ ಆಪ್ತ ಪವಿತ್ರಾಗೌಡ A1 ಆರೋಪಿಯಾಗಿದ್ದಾರೆ.

Related Articles

Back to top button