Kannada NewsKarnataka NewsNationalPolitics

*ರೇಣುಕಾಸ್ವಾಮಿ ಕೊಲೆ ಕೇಸ್: ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಸುತ್ತೇವೆ ಎಂದ ಗೃಹ ಸಚಿವ ಪರಮೇಶ್ವರ್ *

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದು, ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. 

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣ ನಡೆದು ಒಂದು ತಿಂಗಳಾಗಿದೆ. ಮಾಧ್ಯಮಗಳು ಹೇಳಿದರು ಅಂತ ಫಾಸ್ಟ್ ಟ್ರ್ಯಾಕ್ ತನಿಖೆ ಮಾಡಲು ಆಗಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರಿಗೆ ಅವರದ್ದೇ ಆದ ಪ್ರಕ್ರಿಯೆಗಳಿವೆ. ಅದರಂತೆ ತನಿಖೆ ನಡೆಯುತ್ತಿದೆ. ಮೊದಲೇ ಹೇಳಿದಂತೆ ಸರ್ಕಾರ ಯಾರನ್ನೂ ರಕ್ಷಣೆ ಮಾಡುವ ಪ್ರಯತ್ನ ಮಾಡಲ್ಲ. ನಮ್ಮ ಮೇಲೆ ಯಾರ ಒತ್ತಡವೂ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಇದೇ ವೇಳೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಸೂಚಿಸುವಂತೆ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರಕ್ಕೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜನರು ಆಡಳಿತ ಮಾಡಲು ನಮ್ಮನ್ನು ಆಯ್ಕೆ ಮಾಡಿದ್ದಾರೆ. ಅವರನ್ನಲ್ಲ. ನಾವು ಬಿಜೆಪಿಯಿಂದ ಹೇಳಿಸಿಕೊಂಡು ಕೆಲಸ ಮಾಡುವ ಅವಶ್ಯಕತೆ ಇಲ್ಲ. ಕೇಂದ್ರದವರು ನಮಗೆ ಏನು ಹೇಳುತ್ತಾರೆ ನೋಡೋಣ. ಪತ್ರ ಬಂದರೆ ಅದಕ್ಕೆ ತಕ್ಕ ಉತ್ತರ ಕೊಡುತ್ತೇವೆ. ನಮಗೆ ರಾಜ್ಯದಲ್ಲಿ ಜನರು ಅಧಿಕಾರ ಕೊಟ್ಟಿದ್ದಾರೆ. ಕೇಂದ್ರದಲ್ಲಿ ಅವರಿಗೆ ಕೊಟ್ಟಿದ್ದಾರೆ. ಗ್ಯಾರಂಟಿ ಯೋಜನೆಗೆ 58 ಸಾವಿರ ಕೋಟಿ ಖರ್ಚು ಮಾಡುತ್ತಿದ್ದೇವೆ. ಅದರ ಸಾಧಕ-ಬಾಧಕ ನಾವೇ ನೋಡಿಕೊಳ್ಳುತ್ತೇವೆ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button