Latest

*ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಕೇಸ್: ಬೆಚ್ಚಿ ಬೀಳಿಸುವಂತಿದೆ ಮರಣೋತ್ತರ ಪರೀಕ್ಷಾ ವರದಿ*

ಪ್ರಗತಿವಾಹಿನಿ ಸುದ್ದಿ: ಕ್ಷುಲ್ಲಕ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನನ್ನು ನಟ ದರ್ಶನ್ ಹಾಗೂ ಗ್ಯಾಂಗ್ ಅಮಾನುಷವಾಗಿ ಚಿತ್ರ ಹಿಂಸೆ ನೀಡಿ ವಿಕೃತಿ ಮೆರೆದು ಹತ್ಯೆ ಮಾಡಿದ್ದು, ಮರಣೋತ್ತರ ಪರೀಕ್ಷೆ ವರದಿಯಲ್ಲಿ ಉಲೇಖವಾಗಿರುವ ಅಂಶಗಳು ಬೆಚ್ಚಿ ಬೀಳಿಸುವಂತಿದೆ.

ರೇಣುಕಾಸ್ವಾಮಿ ಮೇಲೆ ನಟ ದರ್ಶನ್ ಹಾಗೂ ಗ್ಯಾಂಗ್ ರಕ್ಕಸ ಕೃತ್ಯವೆಸಗಿ ನಾನಾರೀತಿಯ ಚಿತ್ರಹಿಂಸೆ ನೀಡಿದ್ದಾರೆ ಎಂಬುದು ಮರಣೋತ್ತರ ವರದಿಯಲ್ಲಿ ಉಲ್ಲೇಖವಾಗಿದೆ.

ರೇಣುಕಾಸ್ವಾಮಿಯ ದೇಹದ 34 ಕಡೆ ಗಂಭೀರ ಗಾಯಗಳಾಗಿವೆ. ಎದೆಗೆ ಒದ್ದು ಹಿಂಸೆ ನೀಡಿದ್ದಾರೆ. ಪಕ್ಕೆಲುಬು ಮುರಿದು, ಮೂಳೆ ಶ್ವಾಸಕೋಶಕ್ಕೆ ಚುಚ್ಚಿಕೊಂಡಿದೆ. ಆರೋಪಿಗಳ ಹೊಡೆತಕ್ಕೆ ದೇಹದ ಹಲವೆಡೆ ರಕ್ತ ಹೆಪ್ಪುಗಟ್ಟಿದೆ. ಮರ್ಮಾಂಗಕ್ಕೂ ಬಲವಾದ ಪೆಟ್ಟುಬಿದ್ದಿದೆ ಎಂದು ಪೋಸ್ಟ್ ಮಾರ್ಟಮ್ ರಿಪೋರ್ಟ್ ನಲ್ಲಿ ತಿಳಿಸಲಾಗಿದೆ.

Home add -Advt

ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಾನೆ ಎಂಬ ಆರೋಪದಲ್ಲಿ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿದ್ದ ಡಿ ಗ್ಯಾಂಗ್ ಬೆಂಗಳೂರಿನ ಆರ್.ಆರ್.ನಗರದ ಪಟ್ಟಣಗೆರೆ ಶೆಡ್ ನಲ್ಲಿ ಆತನನ್ನು ಕೂಡಿಹಾಕಿ ಚಿತ್ರಹಿಂಸೆ ನೀಡಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಬಳಿಕ ಶವವನ್ನು ಕಾಮಾಕ್ಷಿಪಾಳ್ಯ ಬಳಿ ಚರಂಡಿಗೆ ಎಸೆದು ಹೋಗಿದ್ದರು. ಶವವನ್ನು ನಾಯಿ ಎಳೆಯುತ್ತಿರುವುದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ತನಿಖೆ ನಡೆಸಿದ ಪೊಲೀಸರಿಗೆ ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ನಡೆದಿದ್ದ ಅಮಾಯಕ ವ್ಯಕ್ತಿಯ ಬರ್ಬರ ಹತ್ಯೆ ಪ್ರಕರಣ ಬೆಳಕಿಗೆ ಬಂದಿತ್ತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button