Film & EntertainmentKannada NewsKarnataka NewsLatest

*ದರ್ಶನ್ ಗೆ ಬಿಗ್ ಶಾಕ್: ವಿಜಯಲಕ್ಷ್ಮೀ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಮತ್ತಷ್ಟು ಸಂಕಷ್ಟ ಎದುರಾಗಿದೆ. ಮಾಫಿ ಸಾಕ್ಷಿಗೆ ತಡೆ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ 14ನೇ ಆರೋಪಿ ಪ್ರದೂಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿ ವಜಾಗೊಳಿಸಿದೆ. ಇದರಿಂದಾಗಿ ದರ್ಶನ್ ಗೆ ತೀವ್ರ ಹಿನ್ನಡೆಯಾಗಿದೆ.

ಪ್ರಕರಣದ ಆರೋಪಿ ಪ್ರದೂಷ್, ನ್ಯಾಯಾಲಯದ ಮುಂದೆ ಮಾಫಿ ಸಾಕ್ಷಿಯಾಗಲು ಒಪ್ಪಿಕೊಂಡಿದ್ದರು. ಆದರೆ, ಸಿಆರ್‌ಪಿಸಿ ಸೆಕ್ಷನ್ 164ರ ಅಡಿಯಲ್ಲಿ ಸೂಕ್ತ ನಿಯಮಗಳನ್ನು ಪಾಲಿಸದೆ ಹಾಗೂ ಸಹ-ಆರೋಪಿಗಳ ಗಮನಕ್ಕೆ ತರದೆ ಆತನಿಗೆ ಮಾಫಿ ಸಾಕ್ಷಿ ಸ್ಥಾನಮಾನ ನೀಡಲಾಗಿದೆ ಎಂದು ಆರೋಪಿಸಿ ವಿಜಯಲಕ್ಷ್ಮಿ ಅವರು ಈ ಹಿಂದೆ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿದ ಬಳಿಕ ಅವರು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು.

ವಾದ-ಪ್ರತಿವಾದದ ಬಳಿಕ, ವಿಚಾರಣಾ ನ್ಯಾಯಾಲಯ ಹಾಗೂ ಹೈಕೋರ್ಟ್ ತೆಗೆದುಕೊಂಡ ನಿರ್ಧಾರದಲ್ಲಿ ಯಾವುದೇ ಕಾನೂನುಬಾಹಿರ ಅಂಶಗಳಿಲ್ಲ ಎಂದು ಅಭಿಪ್ರಾಯಪಟ್ತಿದೆ. ಅಲ್ಲದೇ ವಿಜಯಲಕ್ಷ್ಮಿ ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button