*ರೇಣುಕಾಸ್ವಾಮಿ ಕೊಲೆ ಪ್ರಕರಣ*: *ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಮುಕ್ತಾಯ, ನಾಳೆ ಡಾಕ್ಯುಮೆಂಟ್ ಮಾರ್ಕಿಂಗ್*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ವಿಟ್ನೆಸ್ ಆಗಿರುವ ಪ್ರದೋಷ್ ಅವರ ಮಾಫಿ ಸಾಕ್ಷಿ ಹೇಳಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ನಾಲ್ಕು ದಿನಗಳ ಕಾಲ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ನೀಡಿದ ಹೇಳಿಕೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ದಾಖಲಿಸಿಕೊಂಡಿದೆ.
59ನೇ ಸಿಸಿಹೆಚ್ ನ್ಯಾಯಾಲಯದ ಮುಂದೆ ಹಾಜರಾಗಿ ಪ್ರದೋಷ್ ಪ್ರಕರಣದ ಹಲವು ವಿಚಾರಗಳನ್ನು ವಿವರಿಸಿದ್ದಾರೆ. ದರ್ಶನ್ ಹಾಗೂ ಇತರ ಆರೋಪಿಗಳ ವಿರುದ್ಧದ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರವಾಗಿ ಪ್ರದೋಷ್ ನೀಡಿರುವ ಹೇಳಿಕೆ ಇದೀಗ ದಾಖಲೆಗಳ ಭಾಗವಾಗಿದೆ.
ಪ್ರಾಸಿಕ್ಯೂಷನ್‌ಗೆ ಅನುಗುಣವಾಗಿ ಪ್ರದೋಷ್ ಹೇಳಿಕೆ ದಾಖಲಿಸಿದ್ದು, ನಾಲ್ಕು ದಿನಗಳ ಕಾಲ ನಡೆದ ಮಾಫಿ ಸಾಕ್ಷಿ ಹೇಳಿಕೆ ಪ್ರಕ್ರಿಯೆ ಇಂದು ಅಂತ್ಯಗೊಂಡಿದೆ. ಮುಂದಿನ ಹಂತವಾಗಿ ಮಂಗಳವಾರ ಡಾಕ್ಯುಮೆಂಟ್ ಮಾರ್ಕಿಂಗ್ ಪ್ರಕ್ರಿಯೆ ನಡೆಯಲಿದೆ.
ಇದೇ ವೇಳೆ, ಪ್ರದೋಷ್ ಅವರ ಹೇಳಿಕೆಯನ್ನು ಕ್ರಾಸ್ ಎಕ್ಸಾಮಿನೇಷನ್ ಮಾಡಲು ಅವಕಾಶ ನೀಡುವಂತೆ ದರ್ಶನ್ ಪರ ವಕೀಲರು ಸಲ್ಲಿಸಿರುವ ಅರ್ಜಿಯ ವಿಚಾರಣೆಯ ಆದೇಶವನ್ನು ನ್ಯಾಯಾಲಯ ಮಂಗಳವಾರಕ್ಕೆ ಮುಂದೂಡಿದೆ. ಹೀಗಾಗಿ ಮಂಗಳವಾರದ ವಿಚಾರಣೆ ಪ್ರಕರಣದ ಮುಂದಿನ ಹಂತಕ್ಕೆ ಮಹತ್ವ ಪಡೆದಿದೆ. ಡಾಕ್ಯುಮೆಂಟ್ ಮಾರ್ಕಿಂಗ್ ಜೊತೆಗೆ ಕ್ರಾಸ್ ಎಕ್ಸಾಮಿನೇಷನ್‌ಗೆ ಸಂಬಂಧಿಸಿದ ಅರ್ಜಿಯ ಕುರಿತು ನ್ಯಾಯಾಲಯದ ಆದೇಶ ಹೊರಬರುವ ನಿರೀಕ್ಷೆಯಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




