ರೇಣುಕಾಸ್ವಾಮಿ ಹತ್ಯೆ ಪ್ರಕರಣ
ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ15, ಎ16, ಎ17 ಸೇರಿ ಮೂವರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ 16 ಆರೋಪಿಯಾಗಿರುವ ಕೇಶವಮೂರ್ತಿಗೆ ಹೈಕೋರ್ಟ್ ನ್ಯಾ.ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಜಾಮೀನು ಮಂಜೂರು ಮಾಡಿದೆ. ಆರೋಪಿವಿರುದ್ಧ ನೇರವಾಗಿ ಕೊಲೆ ಮಾಡಿರುವ ಆರೋಪವಿಲ್ಲ. ಸಾಕ್ಡ್ಷ್ಯನಾಶ ಆರೋಪವಿದೆ. ಇದು ಜಾಮೀನು ನೀಡಬಹುದಾದ ಪ್ರಕರಣವಾಗಿದೆ. ಅಲ್ಲದೇ ಈತನಿಗೆ ನೀಡುವ ಜಾಮೀನು ಆದೆಶ ಬೇರೆ ಆರೋಪಿಗಳ ವಾದಮಂಡನೆ ಮೇಲೆ ಯಾವುದೆ ಪರಿಣಾಮ ಬೀರುವುದಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಆರೋಪಿ ಕೇಶವಮೂರ್ತಿ ತುಮಕೂರು ಜೈಲಿನಲ್ಲಿದ್ದು, ಜಾಮೀನು ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾನೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕೇಶವಮೂರ್ತಿ ಶೆಡ್ ಗೆ ಹೋಗಿ ಹಣಪಡೆದಿದ್ದ. ಸರೆಂಡರ್ ಆದರೆ ಲಕ್ಷಾಂತರ ರೂಪಾಯಿ ಹಣ ಸಿಗುತ್ತೆ ಎಂದು ಆಮಿಷವೊಡ್ಡಿದ್ದ ಕೊಲೆ ಆರೋಪಿಗಳಾದ ನಟ ದರ್ಶನ್ ಹಾಗೂ ಗ್ಯಾಂಗ್ ಈ ಹಿನ್ನೆಲೆಯಲ್ಲಿ ಹಣಪಡೆದು ಸರೆಂಡರ್ ಆಗಿದ್ದ. 5 ಲಕ್ಷ ಹಣ ಪಡೆದು ಪೊಲೀಸರ ಮುಂದೆ ಸರೆಂಡರ್ ಆಗಿದ್ದ. ಆತನನ್ನು ವಿಚಾರಣೆ ನಡೆಸಿದಾಗ ದರ್ಶನ್ ಹೆಸರು ಹೊರಬಂದಿತ್ತು.
ಇದೇ ವೇಳೆ 57ನೇ ಸಿಸಿಹೆಚ್ ಕೋರ್ಟ್ ರೇಣುಕಾಸ್ವಾಮಿ ಹತ್ಯೆ ಕೇಸ್ ನ ಇನ್ನಿಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ಕಾರ್ತಿಕ್, ನಿಖಿಲ್ ನಾಯಕ್ ಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಈ ಮೂಲಕ ರೇಣುಕಾಸ್ವಾಮಿ ಕೊಲೆ ಕೇಸ್ ನ ದರ್ಶನ್ ಹಾಗೂ ಗ್ಯಾಂಗ್ ನ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಆದಂತಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ