ಪ್ರಗತಿವಾಹಿನಿ ಸುದ್ದಿ: ನಟ ದರ್ಶ ನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್, ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರನದ ಎಲ್ಲಾ 7 ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಈ ಹಿನ್ನೆಲೆಯಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಗೆ 6 ತಿಂಗಳ ಬಳಿಕ ಬೇಲ್ ಸಿಕ್ಕಂತಾಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ, ನಾಗರಾಜು, ಅನುಕುಮಾರ್, ಜಗದೀಶ್ ಅಲಿಯಾಸ್ ಜಗ್ಗ, ಲಕ್ಷ್ಮಣ್, ಪ್ರದೋಶ್ ರಾವ್ ಸೇರಿದಂತೆ 7 ಆರೋಪಿಗಳಿಗೆ ಜಾಮೀನು ಸಿಕ್ಕಿದೆ.
ಈಗಾಗಲೇ ನಟ ದರ್ಶನ್ ಬೆನ್ನು ನೋವು ಹಿನ್ನೆಲೆಯಲ್ಲಿ 6 ವಾರಗಳ ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿ, ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್ ಮಧ್ಯಂತರ ಜಾಮೀನು ನಿನ್ನೆಗೆ ಮುಕ್ತಾಯವಾಗಿತ್ತು. ಸರ್ಜರಿ ಕಾರಣ ನೀಡಿ ದರ್ಶನ್ ಪರ ವಕೀಲರು ಮಧ್ಯಂತರ ಜಾಮೀನು ವಿಸ್ತರಣೆ ಮಾಡುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಂದಿನ ಆದೇಶದವರೆಗೆ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿತ್ತು. ಈ ನಡುವೆಯೇ ಹೈಕೋರ್ಟ್ ನಿಂದ ದರ್ಶನ್ ಗೆ ಜಾಮೀನು ಮಂಜೂರಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ