ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಎಲ್ಲಾ ಆರೋಗಿಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದೆ.
ಕೊಲೆ ಪ್ರಕರಣದಲ್ಲಿ ಅಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಸೇರಿದಂತೆ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು.
ವಿಚಾರಣೆ ನಡೆಸಿದ ನ್ಯಾಯಾಲಯ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಆಗಸ್ಟ್ 14ರವರೆಗೆ ವಿಸ್ತರಿಸಣೆ ಮಾಡಿ ಆದೇಶ ಹೊರಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ