Film & EntertainmentLatest

*ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್ ಗೆ ಶಾಕ್: ಜೈಲುವಾಸವೇ ಗತಿ*

ದರ್ಶನ್ ಹಾಗೂ ಪವಿತ್ರಾ ಗೌಡ ಇಬ್ಬರ ಜಾಮೀನು ಅರ್ಜಿ ವಜಾ

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಕೋರ್ಟ್ ಬಿಗ್ ಶಾಕ್ ನೀಡಿದೆ. ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ ನೀಡಿದೆ.

ಬೆಂಗಳೂರಿನ 57 ನೇ ಸಿಸಿ ಹೆಚ್ ನ್ಯಾಯಾಲಯ ನಟ ದರ್ಶನ್ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇಂದು ಜಾಮೀನು ಸಿಕ್ಕೇ ಸಿಗುತ್ತೆ ಎಂಬ ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಗೆ ಶಾಕ್ ಆಗಿದೆ. ದರ್ಶನ್ ಮತ್ತೆ ಜೈಲಿನಲ್ಲಿಯೇ ಕಾಲಕಳೆಯಬೇಕಾಗಿದೆ.

57ನೇ ಸಿಸಿ ಹೆಚ್ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ನಾಳೆ ದರ್ಶನ್ ಪರ ವಕೀಲರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.

ಇದೇ ವೇಳೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು ಕೂಡ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button