Latest

*ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಮತ್ತಿಬ್ಬರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಹಾಗು ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ 6ನೇ ಆರೋಪಿ ಜಗ್ಗ ಅಲಿಯಾಸ್ ಜಗದೀಶ್ ಹಾಗೂ 7ನೇ ಆರೋಪಿ ಅನಿ ಅಲಿಯಾಸ್ ಅನಿಲ್ ಎಂಬಾತನನ್ನು ಚಿತ್ರದುರ್ಗದಲ್ಲಿ ಚಿತ್ರದುರ್ಗ ಡಿವೈ ಎಸ್ ಪಿ ಹಾಗೂ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದರ್ಶನ್ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಆರೋಪದಲ್ಲಿ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿದ್ದ ದರ್ಶನ್ ಹಾಗೂ ಗ್ಯಾಂಗ್ ಬೆಂಗಳೂರಿನ ಆರ್.ಆರ್ ನಗರ ಬಳಿಯ ಪಟ್ಟನಗೆರೆ ಶೆಡ್ ನಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿತ್ತು. ಮಾರಣಂತಿಕವಾಗಿ ಹಲ್ಲೆ ನಡೆಸಿ, ಮರ್ಮಾಂಗಕ್ಕೆ ಒದ್ದು ವಿಕೃತವಾಗಿ ಹಿಂಸೆ ನೀಡಿ ಬರ್ಬರವಾಗಿ ಹತ್ಯೆ ಮಾಡಿತ್ತು. ಹತ್ಯೆ ಬಳಿಕ ಶವವನ್ನು ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಮೋರಿಗೆ ಎಸೆದಿತ್ತು. ಜೂನ್ 9ರಂದು ಬೆಳಿಗ್ಗೆ ನಾಯಿಯೊಂದು ಶವವನ್ನು ಎಳೆಯುತ್ತಿದ್ದಾಗ ಸರವಜನಿಕರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ತನಿಖೆ ನಡೆಸಿದ ಪೊಲಿಸರಿ ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ನಡೆದ ಕೊಲೆ ಕೃತ್ಯ ಬಹಿರಂಗವಾಗಿತ್ತು.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button