Kannada NewsKarnataka NewsNationalPolitics
*ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಯಾರ ಒತ್ತಡಕ್ಕೂ ಮಣಿಯುವುದಿಲ್ಲ: ಗೃಹ ಸಚಿವ*
ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಯಾರನ್ನೂ ಕೂಡ ರಕ್ಷಣೆ ಮಾಡುವ ಮಾತೇ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರ ಒತ್ತಡಕ್ಕೂ ಮಣಿಯುವುದಿಲ್ಲ ಹಾಗೂ ಯಾರ ಮೇಲೂ ಸಹ ಸಾಫ್ಟ್ ಕಾರ್ನರ್ ತೋರಿಸುವುದಿಲ್ಲ. ಎಲ್ಲವೂ ಕಾನೂನು ರೀತಿಯಲ್ಲಿ ನಡೆಯಲಿದೆ. ನಮ್ಮ ಇಲಾಖೆ ಈ ನಿಟ್ಟಿನಲ್ಲಿ ಎಲ್ಲವನ್ನು ಸಮರ್ಥವಾಗಿ ನಿಭಾಯಿಸಲಿದೆ ಎಂದು ತಿಳಿಸಿದರು.
ಈ ಪ್ರಕರಣ ತನಿಖೆ ನಡೆಯುತ್ತಿರುವುದರಿಂದ ಹೆಚ್ಚು ಹೇಳಲು ಸಾಧ್ಯವಿಲ್ಲ. ದರ್ಶನ್ ಮತ್ತು ತಂಡದವರು ರೇಣಕಾಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಪೊಲೀಸರು ಈ ಆಯಾಮದಲ್ಲೂ ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ