National
*ಸರಕಾರಿ ನೌಕರರು RSS ಕಾರ್ಯ ಚಟುವಟಿಕೆಯಲ್ಲಿ ಭಾಗವಹಿಸುವುದನ್ನು ನಿಷೇಧಿಸುವ ಕಾಯ್ದೆ ರದ್ದು!* *58 ವರ್ಷದ ಹಿಂದಿನ ಕಾಯ್ದೆ ಹಿಂಪಡೆದ ಕೇಂದ್ರ ಸರಕಾರ*


ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಸರಕಾರಿ ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಚಟುವಟಿಕೆಯಲ್ಲಿ ಭಾಗವಹಿಸುವುದನ್ನು ಪ್ರತಿಬಂಧಿಸುವ ಕಾನೂನನ್ನು ಕೇಂದ್ರ ಸರಕಾರ ಹಿಂದಕ್ಕೆ ಪಡೆದಿದೆ.
58 ವರ್ಷಗಳ ಹಿಂದೆ ಜಾರಿಗೊಳಿಸಿದ್ದ ಈ ಕಾನೂನನ್ನು ಈಗ ರದ್ದುಪಡಿಸಲಾಗಿದೆ. ಇನ್ನು ಮುಂದೆ ಸರಕಾರಿ ನೌಕರರೂ ಆರ್ ಎಸ್ಎಸ್ ಎಸ್ ಕಾರ್ಯಚಟುವಟಿಕೆಯಲ್ಲಿ ಭಾಗವಹಿಸಬಹುದಾಗಿದೆ.
1966ರ ನವೆಂಬರ್ 30ರಂದು ಈ ಕಾನೂನು ಜಾರಿಯಾಗಿತ್ತು. ನಂತರದಲ್ಲಿ 2 ಬಾರಿ ತಿದ್ದುಪಡಿ ಕೂಡ ಆಗಿತ್ತು. ಆದರೆ ಇದೀಗ ಈ ನಿಯಮವನ್ನು ತೆಗೆದುಹಾಕಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ