Latest

ಡಿ.ಕೆ.ಶಿವಕುಮಾರ ಪದಗ್ರಹಣ ಕಾರ್ಯಕ್ರಮಕ್ಕೆ ಮತ್ತೆ ಗ್ರಹಣ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರಿ ಸ್ವೀಕರಿಸುವ ಡಿ.ಕೆ.ಶಿವಕುಮಾರ ಕಾರ್ಯಕ್ರಮಕ್ಕೆ ಮತ್ತೊಮ್ಮೆ ಸರಕಾರ ಅನುಮತಿ ನಿರಾಕರಿಸಿದೆ.

ಇದೇ 14ರಂದು ದಿನೇಶ್ ಗುಂಡೂರಾವ್ ಅವರಿಂದ ಅಧಿಕಾರ ಸ್ವೀಕರಿಸುವ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿತ್ತು. ಆದರೆ ಕೇಂದ್ರ ಸರಕಾರದ ಮಾರ್ಗಸೂಚಿಯನ್ವಯ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಹಾಗಾಗಿ ಅನುಮತಿ ನಿರಾಕರಿಸಲಾಗಿದೆ.

ಈ ಮೊದಲು ಮೇ 31ರಂದು ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿತ್ತು. ಆದರೆ ಪ್ರತಿ ಭಾನುವಾರ ಕರ್ಫ್ಯೂ ಘೋಷಿಸಿದ್ದರಿಂದ ಕಾರ್ಯಕ್ರಮ ಮುಂದೂಡಲಾಗಿತ್ತು. ನಂತರ ಜೂನ್ 7ರಂದು ಕಾರ್ಯಕ್ರಮ ಆಯೋಜಿಸಲಾಗಿತ್ತಾದರೂ ಅದಕ್ಕೂ ಸರಕಾರ ಅನುಮತಿ ನೀಡಲಿಲ್ಲ. ಇದೀಗ ಜೂನ್ 14ರ ಕಾರ್ಯಕ್ರಮಕ್ಕೂ ಅನುಮತಿ ಸಿಕ್ಕಿಲ್ಲ.

ಸರಕಾರದ ಕ್ರಮಕ್ಕೆ ವಿಧಾನಸಭೆ ವಿರೋದ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಕಾರ ಕಾರ್ಯಕ್ರಮಕ್ಕೆ ಅನುಮತಿ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

Home add -Advt

ಸರಕಾರದ ಹಲವು ಮಂತ್ರಿಗಳು ಸಾಮಾಜಿಕ ಅಂತರ ಕಾಯದೆ ಅದ್ಧೂರಿ ಕಾರ್ಯಕ್ರಮ ನಡೆಸುತ್ತಿರುವಾಗ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಅನುಮತಿ ನೀಡದಿರುವ ಸರಕಾರದ ಕ್ರಮ ಟೀಕೆಗೆ ಒಳಗಾಗಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ ನೇಮಕವಾಗಿದ್ದರೂ ಅಧಿಕಾರ ಸ್ವೀಕಾರ ಕಾರ್ಯಕ್ರಮ ನಡೆಸಲು ಆಗುತ್ತಿಲ್ಲ.

 

Related Articles

Back to top button