National

*76ನೇ ಗಣರಾಜ್ಯೋತ್ಸವ: ದೆಹಲಿಯ ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ*

ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ 76ನೇ ಗಣರಾಜ್ಯೋತ್ಸವದ ಸಂಭ್ರಮ-ಸದಗರ ಮನೆ ಮಾಡಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸಿದರು.

ರಾಷ್ಟ್ರಪತಿ ಭವನದಿಂದ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಾರೋಟಿನಲ್ಲಿ ಕರ್ತವ್ಯಪಥಕ್ಕೆ ಕರೆತರಲಾಯಿತು. ಅಶ್ವದಳದಿಂದ ಗೌರವ ಸಲ್ಲಿಸಲಾಯಿತು. ಈ ಬಾರಿ ಗಣರಾಜ್ಯೋತ್ಸವಕ್ಕೆ ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೋ ಮುಖ್ಯ ಅತಿಥಿಯಾಗಿ ಆಗಮಿಸಿದ್ದು, ಅವರಿಗೂ ಗೌರವ ವಂದನೆ ಸಲ್ಲಿಸಲಾಯಿತು. ಕರವ್ಯ ಪಥಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಬರಮಾಡಿಕೊಂಡು ಸೇನೆ ಹಾಗೂ ಅಶ್ವದಳಗಳಿಂದ ಗೌರವ ವಂದನೆ ಸಲ್ಲಿಸಲಾಯಿತು.

ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇವೇಸಿದರು. ಬಳಿಕ ವಾಯುಸೇನೆ ವಿಮಾನದ ಮೂಲಕ ಅತಿಥಿಗಳ ಮೇಲೆ ಪುಷ್ಪ ಮಳೆಗರೆಯಲಾಯಿತು.

ಕರ್ತವ್ಯ ಪಥದಲ್ಲಿ ಭೂಸೇನೆ, ವಾಯುಸೇನೆ, ನೌಕಾದಳ, ಮಿಲಿಟರಿ, ಪೊಲೀಸ್ ಪಡೆಗಳಿಂದ ಶಕ್ತಿ ಪ್ರದರ್ಶನ, ಆಕರ್ಷಕ ಪಥಸಂಚಲನ, ವಿವಿಧ ರಾಜ್ಯಗಳ ಸ್ತಬ್ದಚಿತ್ರ ಪ್ರದರ್ಶನ ನಡೆದಿದೆ. ಈ ಬಾರಿ ಪರೇಡ್ ವೀಕ್ಷಣೆಗೆ 45 ಸಾವಿರ ಜನರಿಗೆ ಅವಕಾಶ ಕಲ್ಪಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button