ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ರೈತರು ಮತ್ತೆ ಹೋರಾಟ ಮುಂದುವರೆಸಿದ್ದು, ಜನವರಿ 26 ಗಣರಾಜ್ಯೋತ್ಸವದ ದಿನದಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೈತರು ಬೃಹತ್ ಪರೇಡ್ ನಡೆಸಲಿದ್ದಾರೆ.
ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಈ ಬಗ್ಗೆ ತಿಳಿಸಿದ್ದು, ಗಣರಾಜ್ಯೋತ್ಸವದಂದು ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ ಮುಗಿಸುತ್ತಿದ್ದಂತೆಯೇ ರಾಜ್ಯದ ರೈತರು ಬೆಂಗಳೂರಿನಲ್ಲಿ ಪರೇಡ್ ಆರಂಭಿಸಲಿದ್ದಾರೆ. ತುಮಕೂರು ರಸ್ತೆ ನೈಸ್ ಜಂಕ್ಷನ್ ನಿಂದ ಅರಂಭವಾಗಲಿರುವ ಪರೇಡ್ ಫ್ರೀಡಂ ಪಾರ್ಕ್ ನಲ್ಲಿ ಮುಕ್ತಾಯಗೊಳ್ಳಲಿದೆ ಎಂದರು.
ರಾಜ್ಯದ ಮೂಲೆ ಮೂಲೆಗಳಿಂದ 10 ಸಾವಿರ ವಾಹನಗಳಲ್ಲಿ ರೈತರು ಬೆಂಗಳೂರಿಗೆ ಬರಲಿದ್ದು, ಕೇಂದ್ರದ ಕೃಷಿ ನೀತಿ ವಿರುದ್ಧ ಪರೇಡ್ ಮೂಲಕ ಪ್ರತಿಭಟನೆ ನಡೆಸಲಿದ್ದಾರೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ