Latest

ರೈತರ ಗಣತಂತ್ರ ಪರೇಡ್ ಗೆ ಸಿದ್ಧತೆ; 125 ಟ್ರ್ಯಾಕ್ಟರ್ ಗೆ ಅನುಮತಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಅನ್ನದಾತ ಮತ್ತೆ ಹೋರಾಟದ ಹಾದಿ ಹಿಡಿದಿದ್ದು, ರಾಜಧಾನಿ ಬೆಂಗಳೂರಿನಲ್ಲಿ ರೈತರ ಗಣತಂತ್ರ ಪರೇಡ್ ಗೆ ಸಿದ್ಧತೆ ನಡೆದಿದೆ. ರಾಜ್ಯದ ಮೂಲೆ ಮೂಲೆಗಳಿಂದ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ವಾಹನಗಳಲ್ಲಿ ಆಗಮಿಸಿರುವ ರೈತರು ಬೃಹತ್ ಪರೇಡ್ ಗೆ ಸಜ್ಜಾಗಿದ್ದಾರೆ.

ಉತ್ತರ ಕರ್ನಾಟಕ, ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ರಾಮನಗರ, ತುಮಕೂರು, ಕೋಲಾರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ರೈತರು ಬೆಂಗಳೂರಿಗೆ ಆಗಮಿಸಿದ್ದು, ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ ಮುಗಿಯುತ್ತಿದ್ದಂತೆಯೇ ಇತ್ತ ಬೆಂಗಳೂರಿನಲ್ಲಿ ರೈತರ ಪರೇಡ್ ಆರಂಭವಾಗಲಿದೆ. ಈಗಾಗಲೇ 125 ಟ್ರ್ಯಾಕ್ಟರ್ ಗಳಿಗೆ ಬೆಂಗಳೂರು ಪ್ರವೇಶಿಸಲು ಪೊಲೀಸರು ಅನುಮತಿ ನೀಡಿದ್ದಾರೆ. ಅಲ್ಲದೇ ರೈತರ ಪರೇಡ್ ಗೂ ಅನುಮತಿ ನೀಡಲಾಗಿದೆ.

ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್ ನೇತೃತ್ವದಲ್ಲಿ ಮಾಗಡಿ ರಸ್ತೆ ಸುಮನಹಳ್ಳಿ ಗೇಟ್ ನಿಂದ ರ್ಯಾಲಿ ಆರಂಭವಾಗಲಿದ್ದು, ನಾಯಂಡಹಳ್ಳಿ, ಮೈಸೂರು ರಸ್ತೆ, ಟೌನ್ ಹಾಲ್ ಮೂಲಕವಾಗಿ ಫ್ರೀಡಂ ಪಾರ್ಕ್ ತಲುಪಲಿದ್ದಾರೆ. ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಡ್ರಶೇಖರ್ ನೇತೃತ್ವದಲ್ಲಿ ಸಾವಿರಾರು ರೈತರು ನೈಸ್ ಜಂಕಷನ್ ನಿಂದ ಹೊರಟು ಮೈಸೂರು ರಸ್ತೆ ಮೂಲಕ ಫ್ರೀಡಂ ಪಾರ್ಕ್ ನಲ್ಲಿ ಸಂಗಮಗೊಳ್ಳಲಿದ್ದಾರೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button