
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸ್ತಬ್ಧಚಿತ್ರಗಳ ಪೈಕಿ ರಾಮಮಂದಿರ ಸ್ತಬ್ಧಚಿತ್ರಕ್ಕೆ ಮೊದಲ ಬಹುಮಾನ ಲಭ್ಯವಾಗಿದೆ.
ಈ ಕುರಿತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದು, ಉತ್ತರ ಪ್ರದೇಶದ ಸ್ತಬ್ಧಚಿತ್ರಕ್ಕೆ ಮೊದಲ ಬಹುಮಾನ ಬಂದಿದ್ದು, ಸ್ತಬ್ಧಚಿತ್ರದ ಮುಂಭಾಗ ರಾಮಾಯಣ ಕೃತಿ ರಚಿಸಿದ ಮಹರ್ಷಿ ವಾಲ್ಮೀಕಿಯವರನ್ನು ಹಾಗೂ ಮಧ್ಯಭಾಗದಲ್ಲಿ ನಿರ್ಮಾಣ ಹಂತದಲ್ಲಿರುವ ರಾಮಮಂದಿರ ಮಾದರಿಯನ್ನು ಇರಿಸಲಾಗಿತ್ತು. ಪ್ರಥಮ ಬಹುಮಾನ ಬಂದ ಹಿನ್ನೆಲೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಯುಪಿ ಜನತೆಗೆ ಧನ್ಯವಾದ ತಿಳಿಸಿದ್ದಾರೆ.
ಕೇಂದ್ರ ಸಚಿವ ಕಿರಣ್ ರಿಜಿಜು ಗಣರಾಜ್ಯೋತ್ಸವದಲ್ಲಿ ಮೊದಲ ಸ್ಥಾನ ಗಳಿಸಿದ ಸ್ತಬ್ಧಚಿತ್ರಕ್ಕೆ ಬಹುಮಾತ ವಿತರಿಸಿದರು. ಎರಡನೇ ಬಹುಮಾನವನ್ನು ತ್ರಿಪುರಾ ಹಾಗೂ ಮೂರನೇ ಅತ್ಯುತ್ತಮ ಪ್ರಶಸ್ತಿ ಉತ್ತರಾಖಂಡ್ ಸ್ತಬ್ಧಚಿತ್ರ ಪಡೆದುಕೊಂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ