Latest

*ಪೋಕ್ಸೋ ಆರೋಪಿಯಿಂದ ಲಂಚ ಪಡೆಯುತ್ತಿದ್ದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಲೋಕಾಯುಕ್ತ ಬಲೆಗೆ*

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಪೋಕ್ಸೋ ಕೇಸ್ ಆರೋಪಿಯಿಂದ 3 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ದಾವಣಗೆರೆ ಮಕ್ಕಳ ಸ್ನೇಹಿ ನ್ಯಾಯಾಲಯದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ರೇಖಾ ಕೋಟೆಗೌಡರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ಮಕ್ಕಳ ಸ್ನೇಹಿ ನ್ಯಾಯಾಲಯದ ಸರ್ಕಾರಿ ಅಭಿಯೋಜಕಿ. ಕೌಟುಂಬಿಕ ನ್ಯಾಯಾಲಯದಲ್ಲಿ ಸರ್ಕಾರಿ ವಕೀಲರಾಗಿದ್ದ ರೇಖಾ ಕೋಟೆಗೌಡರ್ ಪೋಕ್ಸೋ ಪ್ರಕರಣದ ಆರೋಪಿಯಿಂದ ಲಂಚ ಪಡೆಯುತ್ತಿದ್ದರು.

ಮಧುಸೂಧನ್ ಕಿತ್ತೂರ್ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ರೇಖಾ ಮನೆ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಆರೋಪಿಯಿಂದ 1 ಲಕ್ಷದ 87 ಸಾವಿರ ರೂಪಾಯಿ ಹಣ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ.

*ನೂರಕ್ಕೆ ನೂರರಷ್ಟು ಗೆಲ್ತೇನೆ ಡೌಟೇ ಇಲ್ಲ ಎಂದ ಸಿದ್ದರಾಮಯ್ಯ*

Home add -Advt

https://pragati.taskdun.com/siddaramaiahreactionkolaravidhanasabha-election/

 

Related Articles

Back to top button