EducationPolitics

*ಕೋವಿಡ್ ಆತಂಕದ ನಡುವೆ ಶಾಲೆಗಳ ಆರಂಭಕ್ಕೆ ಸಿದ್ಧತೆ: ಗೈಡ್ ಲೈನ್ ಬಗ್ಗೆ ಶಿಕ್ಷಣ ಸಚಿವರು ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಒಂದೆಡೆ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದರೆ ಮತ್ತೊಂದೆಡೆ ಮಹಾಮಾರಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈನಡುವೆ ಮೇ 29ರಿಂದ ಶಾಲೆಗಳು ಪ್ರಾರಂಭವಾಗಲಿವೆ. ರಾಜ್ಯದಲ್ಲಿ ಕೋವಿಡ್ ಆತಂಕದ ನಡುವೆ ಶಾಲೆಗಳು ಆರಂಭವಾಗುತ್ತಿದ್ದು, ಗೈಡ್ ಲೈನ್ ವಿಚಾರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯದಲ್ಲಿ ಕೋವಿಡ್ ಆತಂಕವಿದೆ. ಶಾಲೆಗಳು ಮೇ 29ರಿಂದ ಆರಂಭವಾಗುತ್ತಿವೆ. ಆದರೆ ಶಾಲೆಗಳಿಗೆ ಸದ್ಯಕ್ಕೆ ಯಾವುದೇ ಮಾರ್ಗಸೂಚಿ ಇಲ್ಲ ಎಂದರು.

ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಕೊಟ್ಟರೆ ಅದನ್ನು ನಾವು ಅನುಷ್ಠಾನಕ್ಕೆ ತರುತ್ತೇವೆ. ಆರೋಗ್ಯ ಇಲಾಖೆ ಹಾಗೂ ಕೇಂದ್ರ ಸರ್ಕಾರ ನೀಡುವ ಮಾರ್ಗಸೂಚಿಯನ್ನು ನಾವು ಜಾರಿ ಮಾಡುತ್ತೇವೆ. ಈವರೆಗೆ ಆರೋಗ್ಯ ಇಲಾಖೆ ಯಾವು ಮಾರ್ಗಸೂಚಿ ಕೊಟ್ಟಿಲ್ಲ ಎಂದು ಹೇಳಿದರು.

ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಮಾಸ್ಕ್ ಧರಿಸುವುದು ಒಳ್ಳೆಯದು. ಆರೋಗ್ಯದಲ್ಲಿ ವ್ಯತ್ಯಾಸವಿರುವ ಮಕ್ಕಳು ಶಾಲೆಗೆ ಬರುವುದು ಬೇಡ ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಶಿಕ್ಷಕರು, ಮಕ್ಕಳು, ಪೋಷಕರು ಹೆಚ್ಚು ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

Home add -Advt

Related Articles

Back to top button