ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.
ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮೀಸಲಾತಿ ಹೆಚ್ಚಳ ಬಗ್ಗೆ ಗೆಜೆಟ್ ನೊಟಿಫಿಕೇಷನ್ ಹೊರಡಿಸಿದ್ದೇವೆ. ಸುಗ್ರೀವಾಜ್ಞೆಯನ್ನು ಉಭಯ ಸದನಗಳಲ್ಲಿ ಮಂಡನೆ ಮಾಡುತ್ತೇವೆ. ವಿಧೇಯಕದ ಬಗ್ಗೆ ಸದನದಲ್ಲಿ ಸುದೀರ್ಘವಾಗಿ ಚರ್ಚೆ ನಡೆಯಲಿದೆ ಎಂದು ಹೇಳಿದರು.
ಈ ವರ್ಗಗಳಿಗೆ ಕಾನೂನಿನ ರಕ್ಷಣೆಯನ್ನು ನೀಡಲಾಗುತ್ತಿದೆ. ಹಿಂದುಳಿದ ವರ್ಗಗಳ ಮೀಸಲಾತಿ ಬಗ್ಗೆ ಆಯೋಗಗಳ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.
ಯಾವುದೇ ವರ್ಗದ ಮೀಸಲಾತಿ ತೆಗೆಯುವುದಾಗಲಿ, ಸೇರ್ಪಡೆ ಮಾಡುವುದರ ಬಗ್ಗೆಯಾಗಲೀ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ಏಕೆಂದರೆ ಏನೇ ಮಾಡಿದರೂ ಸಂವಿಧಾನ ಹಾಗೂ ಕಾನೂನಿನ ಚೌಕಟ್ಟಿನಲ್ಲಿಯೇ ಮಾಡಬೇಕು. ಮೀಸಲಾತಿ ಅತ್ಯಂತ ಸೂಕ್ಷ್ಮವಾದ ವಿಚಾರವಾಗಿದ್ದು, ಸರ್ಕಾರದ ಮುಖ್ಯಸ್ಥನಾಗಿ ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಮುಂದುವರೆಯಬೇಕು ಎಂದು ತಿಳಿಸಿದರು.
ಪಂಚಮಸಾಲಿ ಸಮುದಾಯ 2ಎ ಮೀಸಲಾತಿಗೆ ಒತ್ತಾಯಿಸುತ್ತಿರುವ ವಿಚಾರವಾಗಿ ಮಾತನಾಡಿದ ಸಿಎಂ, ಮೀಸಲಾತಿ ನಿಟ್ಟಿನಲ್ಲಿ ಬೇರೆ ಬೇರೆ ಆಯೋಗದ ಚರ್ಚೆ ಹಂತದಲ್ಲಿದೆ. ಆಯೋಗದ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದರು.
ಆತ್ಮಹತ್ಯೆಗೆ ಶರಣಾದ ಬಂಡೆ ಮಠದ ಸ್ವಾಮೀಜಿ
https://pragati.taskdun.com/latest/ramanagarabande-muthabasavalinga-swamijisuicide/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ