Kannada NewsKarnataka NewsLatest

*ಗಾಂಧಿ ಭಾರತ ಹೆಸರಲ್ಲಿ ವರ್ಷವಿಡೀ  ಅರ್ಥಪೂರ್ಣ ಕಾರ್ಯಕ್ರಮಕ್ಕೆ ನಿರ್ಣಯ* *ಇಡೀ ವಿಶ್ವಕ್ಕೆ ಸಂದೇಶ ಹೋಗುವ ದಿಕ್ಕಿನಲ್ಲಿ ಸಿದ್ಧತೆ*

*1924 ರಲ್ಲಿ ಕಾಂಗ್ರೆಸ್ ಅಧಿವೇಶನ ನಡೆದಿದ್ದ ಡಿಸೆಂಬರ್ 26, 27 ರಂದು ಬೆಳಗಾವಿಯಲ್ಲಿ CWC ಸಭೆ ಜೊತೆಗೆ ಗಾಂಧಿ ತತ್ವಗಳ ಹವಾ: ಸಭೆಯ ನಿರ್ಣಯ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಆಚರಣೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ ಸಮಿತಿ ಸಭೆಯ ಮುಖ್ಯಾಂಶಗಳು:

• ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್‌ 26 ಮತ್ತು 27ರಂದು ಕಾರ್ಯಕ್ರಮಗಳಿಗೆ ಚಾಲನೆ.

• ಶತಮಾನೋತ್ಸವ ಅಂಗವಾಗಿ ವರ್ಷವಿಡೀ ʻಗಾಂಧೀ ಭಾರತʼ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳ ಆಯೋಜನೆಗೆ ಸಿದ್ಧತೆಗಳನ್ನು ಆರಂಭಿಸುವಂತೆ ಮುಖ್ಯಮಂತ್ರಿ ಅವರಿಂದ ಸೂಚನೆ.

• ಬೆಳಗಾವಿಯಲ್ಲಿ ಡಿ.26ರಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ಮತ್ತು ಡಿ.27ರಂದು ಸಾರ್ವಜನಿಕ ಸಭೆ  ನಡೆಸಲು ನಿರ್ಧಾರ.

• ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿ ನಗರದ ಪ್ರಮುಖ 32 ಕಿಮೀ ಉದ್ದದ ರಸ್ತೆ ಹಾಗೂ 30 ವೃತ್ತಗಳ ದೀಪಾಲಂಕಾರ.

• ಕಾಂಗ್ರೆಸ್‌ ಅಧಿವೇಶನ ನಡೆದ ಸ್ಥಳದಲ್ಲಿ ವೀರಸೌಧ ಅಭಿವೃದ್ಧಿ. ಈ ಸ್ಥಳದಲ್ಲಿ ಗ್ರಂಥಾಲಯ ಮತ್ತು ಗಾಂಧಿ ಪ್ರತಿಮೆ ಅನಾವರಣ.

• ಬೆಳಗಾವಿಯ 2.1 ಕಿ.ಮೀ ಉದ್ದದ ಕಾಂಗ್ರೆಸ್‌ ರಸ್ತೆಯಲ್ಲಿ ಶತಮಾನೋತ್ಸವದ ಸ್ಮಾರಕವಾಗಿ ತಾತ್ಕಾಲಿಕ ವಿರೂಪಾಕ್ಷ ಗೋಪುರ ನಿರ್ಮಾಣ, ರೈಲು ಮಾರ್ಗದ ತಡೆಗೋಡೆಯುದ್ದಕ್ಕೂ ಉಬ್ಬು ಶಿಲ್ಪಗಳ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧಾರ.

•  ಕಣಬರಗಿಯಲ್ಲಿ ಗಂಗಾಧರ ರಾವ್‌ ದೇಶಪಾಂಡೆಯವರ ಸ್ಮಾರಕದಲ್ಲಿ ಮೂರ್ತಿ ಸ್ಥಾಪನೆ, ಮ್ಯೂಸಿಯಂ ಉದ್ಘಾಟನೆ. ಹುದಲಿಯಲ್ಲಿ ಗಾಂಧೀ ಸ್ಮಾರಕ ಹಾಗೂ ಛಾಯಾಚಿತ್ರ ಗ್ಯಾಲರಿಯ ಅಭಿವೃದ್ಧಿ.

• ಗಾಂಧೀಜಿ ಅವರು ವಿವಿಧ ಕಾಲಘಟ್ಟಗಳಲ್ಲಿ ಭೇಟಿ ನೀಡಿದ ರಾಜ್ಯದ 120 ಸ್ಥಳಗಳಲ್ಲಿ ನೆನಪಿನ ಸ್ತಂಭಗಳನ್ನು ನಿರ್ಮಿಸಲು ತೀರ್ಮಾನ.

• ಅಟನ್‌ ಬರೋ ನಿರ್ಮಿಸಿದ ಪ್ರಸಿದ್ಧ ʻಗಾಂಧಿʼ ಸಿನೆಮಾವನ್ನು ಕನ್ನಡದಲ್ಲಿ ನಿರ್ಮಿಸಲು ನಿರ್ಧಾರ.

• ಸುವರ್ಣ ವಿಧಾನಸೌಧದಲ್ಲಿ ಕಾಂಗ್ರೆಸ್‌ ಅಧಿವೇಶನ, ಸ್ವಾತಂತ್ರ್ಯ ಚಳವಳಿಯನ್ನು ಪ್ರತಿಬಿಂಬಿಸುವ ಛಾಯಾಚಿತ್ರ ಗ್ಯಾಲರಿ ನಿರ್ಮಾಣ.

• ಡಿ.26 ರಂದು ಗಣ್ಯ ಪ್ರತಿನಿಧಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಡಿ.27 ರಂದು ಸಾರ್ವಜನಿಕರಿಗೆ ಸಾಂಸ್ಕೃತಿಕ ಕಾರ್ಯಕ್ರಮ.

• ಶತಮಾನೋತ್ಸವದ ನೆನಪಿಗೆ ವಿಶೇಷ ಅಂಚೆ ಚೀಟಿ ಬಿಡುಗಡೆಗೆ ನಿರ್ಧಾರ.

ವರ್ಷವಿಡೀ ಎಲ್ಲಾ ಶಾಲೆಗಳಲ್ಲಿ ʻಗಾಂಧಿ ಭಾರತʼ ಅಡಿಯಲ್ಲಿ ʻನಾವು ಮನುಜರುʼ ಕಾರ್ಯಕ್ರಮಗಳ ಆಯೋಜನೆ. ಮಕ್ಕಳಲ್ಲಿ ಗಾಂಧೀಜಿ ವಿಚಾರಧಾರೆ ಬಗ್ಗೆ ಅರಿವು ಮೂಡಿಸಲು ವಿವಿಧ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ. 

• ಗಾಂಧೀಜಿ ಅವರು ಬೋಧಿಸಿದ ಸಪ್ತ ಪಾತಕಗಳು ಹಾಗೂ ಸಂವಿಧಾನದ ಪೀಠಿಕೆಗಳನ್ನು ಮುದ್ರಿಸಿ ಎಲ್ಲಾ ಶಾಲೆಗಳಲ್ಲಿ ವಿತರಣೆ ಮಾಡಲು ನಿರ್ಧಾರ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಮಾಜಿ ಮುಖ್ಯಮಂತ್ರಿ, ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಎಂ.ವೀರಪ್ಪ ಮೋಯ್ಲಿ, ಸಮಿತಿ ಅಧ್ಯಕ್ಷ, ಸಚಿವ ಎಚ್.ಕೆ.ಪಾಟೀಲ, ಸಚಿವರುಗಳಾದ ಲಕ್ಷ್ಮೀ ಹೆಬ್ಬಾಳಕರ್, ಶಿವರಾಜ ತಂಗಡಗಿ, ಜಮೀರ್ ಅಹ್ಮದ್ ಖಾನ್, ಮಧು ಬಂಗಾರಪ್ಪ, ಆರ್.ವಿ.ದೇಶಪಾಂಡೆ, ಬಿ.ಎಲ್.ಶಂಕರ, ಶಾಸಕ ಆಸೀಫ್ ಸೇಠ್, ವಿನಯ ನಾವಲಗಟ್ಟಿ, ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ ರೋಷನ್, ಎಸ್ಪಿ ಭೀಮಾಶಂಕರ ಗುಳೇದ, ಜಿಪಂ ಸಿಇಒ ರಾಹುಲ ಶಿಂಧೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button