Karnataka NewsUncategorized
ನೂರಕ್ಕೂ ಹೆಚ್ಚು ದೇವಸ್ಥಾನಗಳ ಜೀರ್ಣೋದ್ಧಾರ, ಹೊಸ ಮಂದಿರಗಳ ನಿರ್ಮಾಣ – ಚನ್ನರಾಜ ಹಟ್ಟಿಹೊಳಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ನೂರಕ್ಕೂ ಹೆಚ್ಚು ದೇವಸ್ಥಾನಗಳನ್ನು ಕಳೆದ ನಾಲ್ಕೂವರೆ ವರ್ಷದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರ ಶಾಸಕರ ನಿಧಿ ಸೇರಿದಂತೆ ವಿವಿಧ ಅನುದಾನದಿಂದ ಜೀರ್ಣೋದ್ಧಾರ ಮಾಡಲಾಗಿದೆ. ಅನೇಕ ಹೊಸ ಮಂದಿರಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತಿಳಿಸಿದರು.
ಕರ್ಲೇ ಗ್ರಾಮದ ಶ್ರೀ ರವಳನಾಥ್ ಮಂದಿರದ ನೂತನ ಕಟ್ಟಡ ನಿರ್ಮಾಣದ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ನಂತರ ಮಾತನಾಡಿದ ಚನ್ನರಾಜ ಹಟ್ಟಿಹೊಳಿ, ಇಡೀ ಕ್ಷೇತ್ರದ ಯಾವ ಭಾಗವನ್ನೂ ನಿರ್ಲಕ್ಷ್ಯ ಮಾಡದೆ ಆದ್ಯತೆಯ ಮೇಲೆ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ವಿಶೇಷವಾಗಿ ಮೂಲಭೂತ ಸೌಲಭ್ಯ, ನೀರಿನ ಯೋಜನೆ, ಶಿಕ್ಷಣಗಳಿಗೆ ಮಹತ್ವ ನೀಡಲಾಗಿದೆ. ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಧಾರ್ಮಿಕ ಕ್ಷೇತ್ರಕ್ಕೂ ಅಷ್ಟೇ ಆದ್ಯತೆ ನೀಡಲಾಗುತ್ತಿದೆ. ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯಲು ಮುಂದಿನ ದಿನಗಳಲ್ಲಿ ಸಹ ಜನರು ಇದೇ ರೀತಿಯ ಬೆಂಬಲ, ಸಹಕಾರ ನೀಡಬೇಕು ಎಂದು ವಿನಂತಿಸಿದರು.
ಮೃಣಾಲ್ ಹೆಬ್ಬಾಳಕರ ಮಾತನಾಡಿದರು.
ಈ ಸಮಯದಲ್ಲಿ ದೇವಸ್ಥಾನದ ಟ್ರಸ್ಟ್ ಕಮಿಟಿ ಪದಾಧಿಕಾರಿಗಳು, ವಿನಾಯಕ ಪಾಟೀಲ, ಜಯವಂತ ಪಾಟೀಲ, ಗಣಪತಿ ಸಾಂಬ್ರೇಕರ್, ಅಮೃತ ಕೆಮನಾಳ್ಕರ್, ವಿಷ್ಣು ಗೋವೆಕರ್, ಸ್ನೇಹಲ್ ಲೋಹಾರ, ರಂಜನಾ ಪಾಟೀಲ ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ