ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ರಾಜ್ಯದೆಲ್ಲೆಡೆಯಂತೆ ಬೆಳಗಾವಿಯಲ್ಲೂ ಕೊರೋನಾ ಅಟ್ಟಹಾಸ ಮುಂದುವರಿದಿದ್ದು, ಇಲ್ಲಿ ಶ್ರೀನಗರ ಗಾರ್ಡನ್ ಬಳಿ ವಾಸಿಸುತ್ತಿದ್ದ ನಿವೃತ್ತ ಎಎಸ್ಐ ಶುಕ್ರವಾರ ಬಲಿಯಾಗಿದ್ದಾರೆ.
ಬೆಳಗಾವಿಯಲ್ಲಿ ಗುರುವಾರ 92 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಇಂದು ಸುಮಾರು 60ಕ್ಕೂ ಹೆಚ್ಚು ಜನರಿಗೆ ಸೋಂಕು ದೃಢವಾಗುವ ಸಾಧ್ಯತೆ ಇದೆ. ಇನ್ನೂ 2755 ಜನರ ವರದಿಗಾಗಿ ಜಿಲ್ಲಾಡಳಿತ ಕಾಯುತ್ತಿದೆ. ಈವರೆಗೆ 696 ಜನರಿಗೆ ಸೋಂಕು ದೃಢಪಟ್ಟಿದ್ದು, 18 ಜನರು ಜಿಲ್ಲೆಯಲ್ಲಿ ಕೊರೋನಾಗೆ ಸಾವಿಗೀಡಾಗಿದ್ದಾರೆ.
ಇಲ್ಲಿಯ ಶ್ರೀನಗರ ಗಾರ್ಡನ್ ಬಳಿ ವಾಸವಾಗಿದ್ದ ನಿವೃತ್ತ ಎಎಸ್ಐಗೆ ಕೊರೋನಾ ಲಕ್ಷಣ ಕಾಣಿಸಿದ ಹಿನ್ನೆಲೆಯಲ್ಲಿ ಕಳೆದ ಶನಿವಾರ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಅವರ ಪತ್ನಿಗೆ ಚಿಕಿತ್ಸೆ ಮುಂದುವರಿದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ