Karnataka News

*ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಪತ್ನಿ, ಮಗಳ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಹಾಗೂ ಮಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣದಲ್ಲಿ ತಾಯಿ ಪಲ್ಲವಿ ಹಾಗೂ ತಂಗಿ ಕೃತಿ ಮೇಲೆ ಕೊಲೆ ಮಾಡಿರುವ ಶಂಕೆ ಇದೆ. ಈ ಬಗ್ಗೆ ತನಿಖೆ ನಡೆಸುವಂತೆ ಪುತ್ರ ಕರತಿಕೇಶ್ ಬೆಂಗಳೂರಿನ ಹೆಚ್.ಎಸ್.ಆರ್.ಲೇಔಟ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನನ್ನ ತಾಯಿ, ತಂದೆಯವರಿಗೆ ಒಂದು ವಾರದಿಂದ ಕೊಲೆ ಬೆದರಿಕೆ ಹಾಕುತ್ತಿದ್ದರು. ಅಲ್ಲದೇ ನಾನು ನಿನ್ನೆ ಸಂಜೆ ಮನೆಗೆ ಬಂದು ನೋಡಿದಾಗ ತಂದೆ ರಕ್ತದ ಮಡುವಲ್ಲಿ ಬಿದ್ದಿದ್ದರು. ಅವರ ಪಕ್ಕದಲ್ಲಿ ಅವರ ದೇಹಕ್ಕೆ ಚುಚ್ಚಿದ್ದ ಬಾಟಲ್, ಚಾಕು ಇತ್ತು. ಹಾಗಾಗಿ ತಾಯಿ ಹಾಗೂ ತಂಗುಯೇ ಕೊಲೆ ಮಾಡಿರುವ ಶಂಕೆ ಇದೆ ಎಂದು ದೂರು ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಓಂ ಪ್ರಕಾಶ್ ಪತ್ನಿ ಪಲ್ಲವಿ ಹಾಗೂ ಮಗಳು ಕೃತಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button