Karnataka News

*ಪತ್ನಿಯಿಂದಲೇ ಕೊಲೆಯಾದ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್*

ಪ್ರಗತಿವಾಹಿನಿ ಸುದ್ದಿ : ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಮರ್ಡರ್ ಆಗಿದ್ದು,  ಅವರ ಪತ್ನಿಯೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ‌.

ಬೆಂಗಳೂರಿನ ಹೆಚ್‌ಎಸ್‌ ಆರ್ ಲೇಔಟ್‌ನಲ್ಲಿ ಇಂದು ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಮರ್ಡರ್ ನಡೆದಿದೆ. ಓಂ ಪ್ರಕಾಶ್ ಅವರ ಪತ್ನಿಯೇ ಈ ಹತ್ಯೆ ಮಾಡಿದ್ದಾರೆಂಬ ಆರೋಪಗಳು ಕೇಳಿ ಬರುತ್ತಿವೆ.

ಓಂ ಪ್ರಕಾಶ್ ಅವರ ಪತ್ನಿ ಮಾನಸಿಕ ಸ್ಥಿಮಿತ ಕಳೆದುಕೊಂಡು ಕೊಲೆ ಮಾಡಿದ್ದಾರಂತೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದಾರೆ. ಮನೆಯಲ್ಲಿ ರಕ್ತ-ಸಿಕ್ತ ಕಲೆಗಳನ್ನು ಕಂಡು ಪೊಲೀಸರೇ ಒಂದು ಕ್ಷಣ ಶಾಕ್ ಆಗಿದ್ದಾರೆ.

ಹಲವು ದಿನಗಳಿಂದ ಓಂ ಪ್ರಕಾಶ್ ಅವರ ಪತ್ನಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರಿಂದ ಅವರಿಗೆ ನಿರಂತರವಾಗಿ ಚಿಕಿತ್ಸೆ ಕೊಡಿಸಲಾಗುತಿತ್ತು. ಇಂದು ದಿಢೀರ್ ಚಾಕುವಿನಿಂದ ಚುಚ್ಚಿ-ಚುಚ್ಚಿ ಅವರ ಪತ್ನಿಯೇ ಹತ್ಯೆ ಮಾಡಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಇನ್ನು ಓಂ ಪ್ರಕಾಶ್ ಅವರ ಮೃತ ದೇಹವನ್ನು ಸೆಂಟ್ ಜಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ಸಂಬಂಧ ಅವರ ಪತ್ನಿ ಪಲ್ಲವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ಒಂದು ಚಾಕುವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಓಂಪ್ರಕಾಶ್ ಬೆಳಗಾವಿಯಲ್ಲಿ ಡಿಜಿ – ಐಜಿಪಿಯಾಗಿ ಕೆಲಸ ನಿರ್ವಹಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button