Latest

ಆತ್ಮಹತ್ಯೆಗೆ ಶರಣಾದ ನಿವೃತ್ತ ಡಿವೈಎಸ್ ಪಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಿವೃತ್ತ ಡಿವೈಎಸ್ ಪಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ವಿಜಯನಗರದ ಎಂ.ಸಿ.ಲೇಔಟ್ ನಲ್ಲಿ ನಡೆದಿದೆ.

ಹನುಮಂತಪ್ಪ ಆತ್ಮಹತ್ಯೆಗೆ ಶರಣಾದ ನಿವೃತ್ತ ಡಿವೈಎಸ್ ಪಿ. ಹನುಮಂತಪ್ಪ ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ನಾಳೆ ಕಿಮೋಥೆರಪಿ ಚಿಕಿತ್ಸೆಗೆ ಒಳಗಾಗಬೇಕಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ತಮ್ಮ ಮನೆಯಲ್ಲಿಯೇ ನೇಣುಬಿಗಿದುಕೊಂಡು ಹನುಮಂತಪ್ಪ ಸಾವಿಗೆ ಶರಣಾಗಿದ್ದಾರೆ.

Related Articles

Back to top button