
ಪ್ರಗತಿವಾಹಿನಿ ಸುದ್ದಿ, ಶಿರಸಿ : ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಜಿ.ಎಲ್. ಹೆಗಡೆ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.
ವಯೋ ಸಹಜ ಕಾರಣದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪ್ರಾರಂಭದಲ್ಲಿ ಯಲ್ಲಾಪುರದ ಮಾಧ್ಯಮಿಕ ಶಾಲೆಯಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ಅವರು, ನಂತರ ಉತ್ತರ ಕನ್ನಡ ಜಿಲ್ಲಾ ಉಪನಿರ್ದೇಶಕರಾಗಿ, ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕರಾಗಿ ಹಾಗೂ ಧಾರವಾಡ ಡಯಟ್ ನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಕೊನೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರಾಗಿ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.
ತಮ್ಮ ಸೇವಾವಧಿಯ ಉದ್ದಕ್ಕೂ ದಕ್ಷ ಹಾಗೂ ಪ್ರಾಮಾಣಿಕ ಸೇವೆಗೆ ಹೆಸರಾಗಿದ್ದರು. ಜಿ ಎಲ್ ಹೆಗಡೆ ಇವರು ಅಂಬಾಗಿರಿ ದೇವಸ್ಥಾನದ ಅಧ್ಯಕ್ಷರಾಗಿ, ದಿಗ್ಧರ್ಶಕರೂ ಆಗಿ ಸೇವೆ ಸಲ್ಲಿಸಿದ್ದರು. ಹೆಗಡೆಯವರ ಅಂತಿಮ ಕ್ರಿಯೆ ಅವರ ಹುಟ್ಟುರಾದ ಕುಮಟಾ ತಾಲೂಕು ಹೊಳೆಗದ್ದೆ (ಬೆತ್ತಗೇರಿ)ಯಲ್ಲಿ ಬುಧವಾರ ನಡೆಯಲಿದೆ.
ನಾಳೆ ಬೆಳಿಗ್ಗೆ 9.30 ಗಂಟೆಗೆ ಅಂತಿಮ ಕ್ರಿಯೆ ನಡೆಸಲಾಗುವುದೆಂದು ಮೃತರ ಸಹೋದರ ಎಸ್ ಎಲ್ ಹೆಗಡೆಯವರು ತಿಳಿಸಿದ್ದಾರೆ.