Kannada NewsKarnataka NewsLatest

*ಕುರುಬರ ಸಂಘದ ಮಾಜಿ ಕಾರ್ಯಾಧ್ಯಕ್ಷ ಲಿಂಗಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಡರಾತ್ರಿ ನಿಧನರಾದ ಪ್ರದೇಶ ಕುರುಬರ ಸಂಘದ ಮಾಜಿ ಕಾರ್ಯಾಧ್ಯಕ್ಷ, ನಿವೃತ್ತ ಎಂಜಿನಿಯರ್ ಲಿಂಗಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪಡೆದರು.

ಶ್ರೀನಗರ ನರ್ಸಿಂಗ್ ಹೋಮ್ ಸಂಸ್ಥಾಪಕರು, ಶ್ರೀನಗರ ಎಜುಕೇಶನ್ ಫೌಂಡೇಶನ್ ಸಂಸ್ಥಾಪಕರೂ ಆಗಿದ್ದ ಲಿಂಗಪ್ಪ, ನಿನ್ನೆ ತಡರಾತ್ರಿ 11.34 ಕ್ಕೆ ವಿಧಿವಶರಾದರು.

ಬೆಂಗಳೂರಿನ ಶ್ರೀನಿವಾಸ ನಗರ ದಲ್ಲಿರುವ (ವಿದ್ಯಾಪೀಠದ ಹತ್ತಿರ) ಕಾಗಿನೆಲೆ ಶಾಖಾ ಮಠದಲ್ಲಿ ಅವರ ಪಾರ್ಥಿವಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಿಂಗಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.

ಲಿಂಗಪ್ಪ ಅವರ ಅಂತ್ಯಕ್ರಿಯೆಯನ್ನು ಗುರುವಾರ ಅ.26ರಂದು ಸ್ವಗ್ರಾಮವಾದ ಹಲಕೂರಿನಲ್ಲಿ ಬೆಳಿಗ್ಗೆ 11 ಗಂಟಗೆ ನೆರವೇರಿಸಲಾಗುವುದು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button