Latest

ಮಾಜಿ ಸಚಿವ ಪ್ರಭಾಕರ ರಾಣೆ ವಿಧಿವಶ

ಪ್ರಗತಿವಾಹಿನಿ ಸುದ್ದಿ; ಕಾರವಾರ: ಶಿಕ್ಷಕರ ದಿನಾಚರಣೆಯಂದೇ ನಿವೃತ್ತ ಶಿಕ್ಷಕರೂ ಆಗಿದ್ದ ಮಾಜಿ ಸಚಿವ ಪ್ರಭಾಕರ ರಾಣೆ ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಾಸ್ಸಾಗಿತ್ತು.

ಉತ್ತರ ಕನ್ನಡ ಜಿಲ್ಲೆಯ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ ಪ್ರಭಾಕರ ರಾಣೆ ಅದೇ ಸಂಸ್ಥೆಯ ಅಧ್ಯಕ್ಷರೂ ಆಗಿದ್ದರು. ಬಾಪೂಜಿ ಗ್ರಾಮೀಣ ವಿಕಾಸ ಸಂಸ್ಥೆಯಡಿ ಕಾರವಾರ-ಜೋಯಿಡಾ ಭಾಗದಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಪಿಯುಸಿ ಕಾಲೇಜುಗಳಲ್ಲಿ ಆರಂಭಿಸಿದ್ದರು.

ನಂತರ ಕಾರವಾರ ಮತ ಕ್ಷೇತ್ರದಿಂದ ಮೂರು ಬಾರಿ ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿ, ವೀರಪ್ಪ ಮೊಯ್ಲಿ ಸರ್ಕಾರದ ಅವಧಿಯಲ್ಲಿ ರಾಜ್ಯದ ಗ್ರಂಥಾಲಯ ಹಾಗೂ ವಯಸ್ಕರ ಶಿಕ್ಷಣ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು.

ಪ್ರಭಾಕರ ರಾಣೆಯವರು ಶಿಕ್ಷಕರಾಗಿ ಹಲವು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ವಿದ್ಯಾದಾನ ಮಾಡಿದ ಹಿರಿಮೆಗೆ ಪಾತ್ರರಾಗಿದ್ದಾರೆ.
ಮುರುಘಾಶ್ರೀ ಲೈಂಗಿಕ ದೌರ್ಜನ್ಯ ಪ್ರಕರಣ; ನ್ಯಾಯಾಂಗ ತನಿಖೆಗೆ ಒಪ್ಪಿಸಲು ಆಗ್ರಹ

Related Articles

Back to top button