
ಪ್ರಗತಿವಾಹಿನಿ ಸುದ್ದಿ: ರೇವ್ ಪಾರ್ಟಿ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರುವ ಘಟನೆ ರಾಮನಗರದ ಹೊರವಲಯದ ಅಯಾನಾ ಖಾಸಗಿ ರೆಸಾರ್ಟ್ ನಲ್ಲಿ ನಡೆದಿದೆ.
ಬೆಂಗಳೂರು ದಕ್ಷಿಣ ಎಸ್ ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ದಾಲಿ ನಡೆಸಲಾಗಿದ್ದು, 115 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ದೇವಿಗೆರೆ ಕ್ರಾಸ್ ಸಮೀಪದಲ್ಲಿರುವ ಅಯಾನಾ ಖಾಸಗಿ ರೆಸಾರ್ಟ್ ನಲ್ಲಿ ತಡ ರತರಿ ರೇವ್ ಪಾರ್ಟಿ ನಡೆಯುತ್ತಿದೆ ಎಂಬ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಲಿ ನಡೆಸಿದ್ದರು.
ದಾಲಿ ವೇಳೆ 35 ಯುವತಿಯರು ಸೇರಿದಂತೆ 115 ಜನರನ್ನು ವಶಕ್ಕೆ ಪಡೆಯಲಾಗಿದೆ. ಎಲ್ಲರನ್ನು ಬಂಧಿಸಿ ರಾಮನಗರದ ಜಿಲ್ಲಾ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗಿದೆ.



