
ಪ್ರಗತಿವಾಹಿನಿ ಸುದ್ದಿ: ಬೆಳೆ ಹಾನಿಗೆ ಒಳಗಾದ ರೈತರಿಗೆ ಮುಂದಿನ ವಾರವೇ ಬೆಳೆ ಪರಿಹಾರ ವಿತರಣೆ ಆಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ವಿವಿಧ ಜಿಲ್ಲಾಧಿಕಾರಿಗಳ ಜೊತೆ ಇಂದು ಪ್ರಗತಿ ಪರಿಶೀಲನೆ ಸಭೆ ಬಳಿಕ ಮಾಹಿತಿ ನೀಡಿದ ಅವರು, ಮುಂದಿನ ವಾರ ರೈತರಿಗೆ ಬೆಳೆ ಹಾನಿ ವಿತರಣೆ ಆಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬೆಳೆ ಹಾನಿ ಪರಿಹಾರವಾಗಿ 170 ಕೋಟಿ ರೂಪಾಯಿ ವಿತರಣೆಯಾಗಲಿದೆ. 77 ಸಾವಿರ ಹೆಕ್ಟೇರ್‌ನಲ್ಲಿ ಬೆಳೆಹಾನಿಯಾಗಿತ್ತು ಎಂದು ಹೇಳಿದರು. ಸುಮಾರು 642 ಕೋಟಿ ರೂಪಾಯಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಇದೆ. ಈಗಾಗಲೇ 162 ಕೋಟಿ ರೂಪಾಯಿ ಪರಿಹಾರ ವಿತರಣೆಯಾಗಿದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ