![](https://pragativahini.com/wp-content/uploads/2022/09/R.G.Pandit.jpg)
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಹಿರಿಯ ಸಾಮಾಜಿಕ ಮುಂದಾಳುವಾಗಿದ್ದ ರಾಣಿ ಚನ್ನಮ್ಮ ನಗರದ ಹಿರಿಯ ನಾಗರಿಕ ಆರ್.ಜಿ.ಪಂಡಿತ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.
ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಸಂಜೆ ನಿಧನರಾದರು. ಅವರಿಗೆ ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರು ಇದ್ದಾರೆ.
ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದ ಅವರು, ನಿವೃತ್ತಿಯ ನಂತರ ಸಾಯಿ ಸೇವಾ ಸಮಿತಿಯ ಮೂಲಕ ಹಲವಾರು ಉಚಿತ ಆರೋಗ್ಯ ಶಿಬಿರಗಳನ್ನು ಸಂಘಟಿಸಿದ್ದರು. ಅವರು ಬೆಳಗಾವಿ ಹವ್ಯಕ ಸಂಘದ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದರು.
ಸೋಮವಾರ ಬೆಳಗ್ಗೆ 9.30ಕ್ಕೆ ಶಹಾಪುರದ ರುದ್ರಭೂಮಿಯಲ್ಲಿ ಅವರ ಅಂತ್ಯಸಂಸ್ಕಾರ ನಡೆಯಲಿದೆ.
https://pragati.taskdun.com/latest/unlawfull-religious-conversionfirst-convictionuttar-pradesh/
ಕಾನೂನು ಬಾಹಿರ ಧರ್ಮ ಪರಿವರ್ತನೆ ಪ್ರಕರಣದ ಮೊಟ್ಟ ಮೊದಲ ಶಿಕ್ಷೆ ಪ್ರಕಟ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ