
ಪ್ರಗತಿವಾಹಿನಿ ಸುದ್ದಿ: ತಹಶೀಲ್ದಾರ್ ಹಾಗೂ ಕೇಸ್ ವರ್ಕರ್ ಸಹಿ ನಕಲು ಮಾಡಿ 63 ಲಕ್ಷ ರೂಪಾಯಿ ದೋಚಿದ್ದ ರೆವೆನ್ಯೂ ಇನ್ಸ್ ಪೆಕ್ಟರ್ ರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಆರ್ ಐ ಹೇಮಂತ್ ಕುಮಾರ್ ಬಂಧಿತ ಆರೋಪಿ. ಮುಜರಾಯಿ ಇಲಾಖೆಯ ಲಕ್ಷಾಂತರ ರೂಪಾಯಿ ಹಣವನ್ನು ದೋಚಿ ಸಿಕ್ಕಿಬಿದ್ದಿದ್ದಾರೆ.
ಹೇಮಂತ್ ಕುಮಾರ್ 2023ರಿಂದ ಇಲ್ಲಿಯವರೆಗೆ ಇಬ್ಬರು ತಹಶೀಲ್ದಾರ್, ಓರ್ವ ಕೇಸ್ ವರ್ಕರ್ ಸಹಿ ಮತ್ತು ಸೀಲ್ ಬಳಸಿ ಮುಜರಾಯಿ ಇಲಾಖೆಯಲ್ಲಿನ 63 ಲಕ್ಷ ಹಣವನ್ನು ದೋಚಿದ್ದರು. ಮುಜರಾಯಿ ಇಲಾಖೆಯ ದೇವಾಲಯದಿಂದ ಸರ್ಕಾರಕ್ಕೆ ಹಣ ಸಂದಾಯವಾಗಿಲ್ಲ ಎಂಬ ಬಗ್ಗೆ ದೊಡ್ಡಬಳ್ಳಾಪುರ ತಹಶೀಲ್ದರ ವಿಭಾ ವಿದ್ಯಾ ರಾಥೋಡ್ ಗೆ ದೂರು ಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಹೇಮಂತ್ ಕುಮಾರ್ ನನ್ನು ಬಂಧಿಸಲಾಗಿದ್ದು, ರೆವೆನ್ಯೂ ಇನ್ಸ್ ಪೆಕ್ಟರ್ ಹುದ್ದೆಯಿಂದ ಅಮಾನತು ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ