ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಕ್ರಮವಾಗಿ ಲಾರಿಯೊಂದರಲ್ಲಿ ಇಲ್ಲಿನ ಗಾಂಧಿನಗರದಿಂದ ಕೊಲ್ಲಾಪುರಕ್ಕೆ ಸಾಗಾಟ ಮಾಡಲಾಗುತ್ತಿದ್ದ 12 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಸಂಕೇಶ್ವರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬೆಳಗಾವಿಯ ಶಾಂತಿನಾಥ ಪಾಟೀಲ ಎಂಬುವವರು ಈ ಅಕ್ಕಿ ಸಾಗಾಟ ಮಾಡುತ್ತಿದ್ದು ಲಾರಿ ಚಾಲಕ, ಸಂಕೇಶ್ವರ ವಡ್ಡರಗಲ್ಲಿ ನಿವಾಸಿ ರಮೇಶ ನಾರಾಯಣ ಮನುವಡ್ಡರ್ ನನ್ನು ಬಂಧಿಸಲಾಗಿದೆ. ಶಾಂತಿನಾಥ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಸಂಕೇಶ್ವರ ಠಾಣೆ ಪಿಎಸ್ಐ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ಲಾರಿ ತಡೆದು ಪರಿಶೀಲನೆ ಮಾಡಿದಾಗ ನಾಗರಿಕ ಪೂರೈಕೆಗಾಗಿ ವಿತರಣೆಯಾದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಬಯಲಿಗೆ ಬಂದಿದೆ.
ಆಹಾರ ಮತ್ತು ನಾಗರಿಕ ಪೂರೈಕೆ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು. ಅಗತ್ಯವಸ್ತುಗಳ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಶಿರಾಡಿಘಾಟ್ ನಲ್ಲಿ ಭೂಕುಸಿತ; ವಾಹನ ಸಂಚಾರ ಸ್ಥಗಿತ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ