Belagavi NewsBelgaum NewsKannada NewsKarnataka News

*ರಸ್ತೆ ಅಪಘಾತ: ಗ್ರಾಮ ಪಂಚಾಯ್ತಿ ಸದಸ್ಯ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಅವ್ಯಾಹತ ಮಳೆಯಿಂದಾಗಿ ರಸ್ತೆಯ ಮಧ್ಯದಲ್ಲಿ ನಿರ್ಮಾಣವಾದ ತೆಗ್ಗುಗುಂಡಿಯಲ್ಲಿ ಬೈಕ್ ಬಿದ್ದು ಸವಾರನ ನಿಯಂತ್ರಣ ಕಳೆದುಕೊಂಡ ಪರಿಣಾಮ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಾಲ್ಲೂಕಿನ ಇಟಗಿ ಗ್ರಾಮ ಪಂಚಾಯ್ತಿ ಸದಸ್ಯ ಭೀಮಪ್ಪ ರಾಮಪ್ಪ ಭೋವಿ (55) ಮೃತಪಟ್ಟ ಘಟನೆ ಸಮೀಪದ ಬೇಕವಾಡ ಬಳಿ ಬೆಳಗಾವಿ ತಾಳಗುಪ್ಪ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಜರುಗಿದೆ.

ಮೀನು ವ್ಯಾಪಾರ ಮಾಡುತ್ತಿದ್ದ ಇಟಗಿ ಗ್ರಾಮದ ಭೀಮಪ್ಪ ಬೇಕವಾಡದಲ್ಲಿ ಮೀನುಗಳನ್ನು ಮಾರಾಟ ಮಾಡಿ ಬೀಡಿ ಕಡೆಗೆ ಹೊರಟ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭೀಮಪ್ಪ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ನಂದಗಡ ಠಾಣೆಯ ಪೊಲೀಸರು ತಿಳಿಸಿದ್ದಾರೆ.

Home add -Advt

Related Articles

Back to top button