Belagavi NewsBelgaum NewsKannada NewsKarnataka News
*ರಸ್ತೆ ಅಪಘಾತ: ಚಿಕಿತ್ಸೆ ಫಲಿಸದೆ ಕಾನ್ಸ್‌ಟೇಬಲ್ ಸಾವು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ಡಿಎಆರ್‌ನಲ್ಲಿ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಥಣಿ ತಾಲೂಕಿನ ಚಮಕೇರಿ ಗ್ರಾಮದ ನಿವಾಸಿ ಸಾನ್ನಪ್ಪಿದ್ದಾರೆ.
ಹನುಮಂತ ಪಡೋಲ್ಕರ್ ಮೃತ ಪೊಲೀಸ್ ಕಾನ್ಸ್‌ಟೇಬಲ್. ಕಳೆದ ಕೆಲ ದಿನಗಳ ಹಿಂದೆ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ತಲೆಗೆ ಪೆಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹನುಮಂತ ಅವರು ಶನಿವಾರ ನಿಧನ ಹೊಂದಿದ್ದಾರೆ.