Latest

*ಭೀಕರ ರಸ್ತೆ ಅಪಘಾತ: 24 ಗಂಟೆಯಲ್ಲಿ ರಾಜ್ಯದಲ್ಲಿ 51 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಸ್ತೆ ಅಪಘಾತ ಪ್ರಕರಣ ದಿನೇ ದಿನೇ ಹೆಚ್ಚುತ್ತಿದೆ. ಒಂದೇ ದಿನದಲ್ಲಿ ರಸ್ತೆ ಅಪಘಾತದಲ್ಲಿ 51 ಜನರು ಮೃತಪಟ್ಟಿದ್ದಾರೆ.

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 51 ಜನರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಟ್ರಾಫಿಕ್ ಹಾಗೂ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಭಾನುವಾರ ಹಾಸನದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಜನ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 51 ಜನರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ಪೈಕಿ ಹಲವು ಪ್ರಕರಣಗಳು ಅತಿ ವೇಗ ಹಾಗೂ ಅಜಾಗರೂಕ ಚಾಲನೆಯಿಂದ ಸಂಭವಿಸಿದೆ. ರಸ್ತೆ ಸುರಕ್ಷತೆಗೆ ಬಗ್ಗೆ ಎಲ್ಲಾ ಪಾಲುದಾರರಿಂದ ಜವಾಬ್ದಾರಿಯುತ ನಡವಳಿಕೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button